ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ

Last Updated 27 ಜುಲೈ 2021, 11:28 IST
ಅಕ್ಷರ ಗಾತ್ರ

ಮಸ್ಕಿ: ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂರಕ್ಷ ಸಮಿತಿ ಮಂಗಳವಾರ ಪಟ್ಟಣದಲ್ಲಿ ತಹಶೀಲ್ದಾರ್ ಆರ್‌.ಕವಿತಾ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಸದಾಶಿವ ಆಯೋಗದ ವರದಿ ಜಾರಿಗೆ ತರುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಕೂಡಲೇ ಸರ್ಕಾರ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದೆ.

ತಹಶೀಲ್ದಾರ್ ಕವಿತಾ ಆರ್. ಮನವಿ ಸ್ವೀಕರಿಸಿದರು.

ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ ಹೂವಿನಭಾವಿ, ಮುಖಂಡರಾದ ಕಾಸೀಮಪ್ಪ ಮುರಾರಿ, ವಿಜಯಕುಮಾರ ಹರ್ವಾಪೂರ, ಲಕ್ಷ್ಮಣ ಕಡಬೂರು, ಶಿವಪ್ಪ ಸಂತೆಕೆಲ್ಲೂರು, ಅಮೃತ ಯದ್ದಲದಿನ್ನಿ, ವಿಜಯಕುಮಾರ ಸಾಗರ ಕ್ಯಾಂಪ್ ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT