ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ’

Last Updated 25 ಅಕ್ಟೋಬರ್ 2021, 3:47 IST
ಅಕ್ಷರ ಗಾತ್ರ

ರಾಯಚೂರು: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಒದಗಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಪಾವಗಡ ಶ್ರೀರಾಮ ಎಚ್ಚರಿಸಿದರು.

ಪರಿಶಿಷ್ಟ ಜಾತಿಗೆ ಜನಸಂಖ್ಯೆ ಆಧಾರದ ಮೇಲೆ ಒಳಮೀಸಲಾತಿ ನೀಡುವ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರು ಈಗಾಗಲೇ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಡಳಿತ ನಡೆಸಿದ ಎಲ್ಲ ಸರ್ಕಾರಗಳು ವರದಿ ಅಂಗೀಕರಿಸದೇ ನಿರ್ಲಕ್ಷ್ಯ ವಹಿಸಿವೆ. ಒಂಭತ್ತು ವರ್ಷಗಳ ಹಿಂದೆ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗಿತ್ತು. ಆಗ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದರು. ನಿರಂತರ ಹೋರಾಟದ ಮೂಲಕ ಚಳವಳಿ ಜೀವಂತವಾಗಿಟ್ಟಿದ್ದೇವೆ. ಮುಂಬರುವ ಅಧಿವೇಶನದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದರು.

ಮುಖಂಡ ಹೇಮರಾಜ ಅಸ್ಕಿಹಾಳ, ಸಾಗರ.ಪಿ.ಜೆ, ಉರುಕುಂದಪ್ಪ ಹಾಗೂ ನರಸಿಂಹಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT