ಬುಧವಾರ, ಸೆಪ್ಟೆಂಬರ್ 28, 2022
26 °C
ಸರ್ಕಾರಿ ಪ್ರಥಮ ರಾಜ್ಯ ಮಹಿಳಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

’ದಿ.ರಾಜೀವ್ ಗಾಂಧಿ ದೂರ ದೃಷ್ಟಿಕೋನದ ಪ್ರಧಾನಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ‘ದಿ.ರಾಜೀವ್ ಗಾಂಧಿ ಅವರು ದೇಶ ಕಂಡಂಥ ಯುವ ಮತ್ತು ದೂರ ದೃಷ್ಟಿಕೋನವುಳ್ಳ ಪ್ರಧಾನಿಯಾಗಿದ್ದರು. ದೇಶದಲ್ಲಿ ತಂತ್ರಜ್ಞಾನದ ಅಭಿವೃದ್ಧಿ, ಕೈಗಾರಿಕೆಗಳ ಅಭಿವೃದ್ಧಿ, ಪಂಚಾಯತ್ ರಾಜ್ ವ್ಯವಸ್ಥೆ, ಸಾಮಾಜಿಕ ಶಾಂತಿ ಮತ್ತು ಸಾಮರಸ್ಯ ಸೇರಿದಂತೆ ಮುಂತಾದ ಕ್ಷೇತ್ರಗಳಲ್ಲಿ ಅವರು ನೀಡಿದ ಕೊಡುಗೆ ಅವಿಸ್ಮರಣೆಯವಾಗಿದೆ‘ ಎಂದು ಸರ್ಕಾರಿ ಪ್ರಥಮ ರಾಜ್ಯ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನಕುಮಾರ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ರಾಜ್ಯ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ  ಜನ್ಮದಿನಾಚರಣೆ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

’ರಾಜೀವ್‌ಗಾಂಧಿ ಪ್ರಧಾನಿಯಾಗಿದ್ದಾಗ ಕೈಗೊಂಡ ಜನಪರ ಕಾರ್ಯಗಳು ಎಲ್ಲರಿಗೂ  ಮಾದರಿಯಾಗಿವೆ. ಅವರ ಶ್ರೇಷ್ಠ ಕಾರ್ಯ ಮತ್ತು ಉದ್ದೇಶಗಳ ಸ್ಮರಣೆ ಮತ್ತು ಅವುಗಳನ್ನು ಮುಂದುವರಿಸಿಕೊಂಡು ಹೋಗುವ ಕಾರಣಕ್ಕಾಗಿ ಇಂದಿನ ದಿನವನ್ನು ಸದ್ಭಾವನ ದಿನವನ್ನಾಗಿ ಆಚರಿಸಲಾಗುತ್ತಿದೆ’ ಎಂದರು.

ಪ್ರತಿಜ್ಞಾವಿಧಿಯನ್ನು ಬೋಧಿಸಿದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಸಂತೋಷಕುಮಾರ ರೇವೂರ್ ಮಾತನಾಡಿ, ‘ದೇಶದ ಪ್ರಜೆಗಳು ಅದರಲ್ಲೂ ವಿಶೇಷವಾಗಿ ಯುವ ಸಮುದಾಯ ದೇಶವನ್ನು ಬಲಿಷ್ಠವನ್ನಾಗಿಸಲು ಅಗತ್ಯವಾಗಿರುವ ಸಾಮಾಜಿಕ ಶಾಂತಿ, ಸಾಮರಸ್ಯ, ಕೋಮು ಸೌಹಾರ್ದತೆ, ಸಹಿಷ್ಣುತೆ, ಸಂಯಮ ಮುಂತಾದ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಮುಖ್ಯವಾಗಿದೆ‘ ಎಂದರು.

ವಿದ್ಯಾರ್ಥಿನಿಯರು ಮತ್ತು ಯುವ ಸಮುದಾಯ ಇಂತಹ ಉದಾತ್ತ ಮೌಲ್ಯಗಳನ್ನು ಸ್ವತಃ ಅಳವಡಿಸಿಕೊಳ್ಳುವ ಜೊತೆಗೆ ಇತರರು ಸಹ ಅವುಗಳನ್ನು ರೂಡಿಸಿಕೊಳ್ಳುವಂತೆ ಪ್ರೇರೇಪಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾಲೇಜಿನ ಎಲ್ಲ ವಿದ್ಯಾರ್ಥಿನಿಯರು, ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು