ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಚಪ್ಪಲಿ ಹಾರ: ಮುಸ್ಲಿಮರಿಂದ ಪ್ರತಿಭಟನೆ

Published 31 ಜನವರಿ 2024, 5:17 IST
Last Updated 31 ಜನವರಿ 2024, 5:17 IST
ಅಕ್ಷರ ಗಾತ್ರ

ಸಿರವಾರ (ರಾಯಚೂರು ಜಿಲ್ಲೆ): ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರದ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಹಿನ್ನೆಲೆಯಲ್ಲಿ ಸಿರವಾರದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.

ಬೆಳಗಿನ ಜಾವ ಕಿಡಿಗೇಡಿಗಳು ಟಿಪ್ಪು ಸುಲ್ತಾನ್‌ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ. ಇದನ್ನು ಗಮನಿಸಿದ ಯುವಕರು ತಮ್ಮ ಸಮುದಾಯದವರಿಗೆ ಸುದ್ದಿ ತಲುಪಿಸಿದ್ದಾರೆ. ಇದರಿಂದ ಭಾರಿ ಸಂಖ್ಯೆಯಲ್ಲಿ ಸೇರಿದ ಜನ ಮುಖ್ಯರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸರು, ರಸ್ತೆ ಮಧ್ಯೆ ಪ್ರತಿಭಟನೆ ಮಾಡಿದರೆ ಸಂಚಾರಕ್ಕೆ ತೊಂದರೆಯಾಗಲಿದೆ. ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಆದರೂ, ಕಿಡಿಗೇಡಿಗಳನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲದು ಎಂದು ಆಕ್ರೋಶ ವ್ಯಕ್ತಪಡಿಸಿರುವ ಮುಸ್ಲಿಮರು, ಪ್ರತಿಭಟನೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT