ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಗಸ್ಟ್ 18ರಂದು ‘ಸಂಘರ್ಷದ ಹಾದಿಯಲ್ಲಿ’ ಕೃತಿ ಬಿಡುಗಡೆ

Published 16 ಆಗಸ್ಟ್ 2024, 15:08 IST
Last Updated 16 ಆಗಸ್ಟ್ 2024, 15:08 IST
ಅಕ್ಷರ ಗಾತ್ರ

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ವತಿಯಿಂದ ಆಗಸ್ಟ್ 18ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಸಾಹಿತಿ ಬಾಬು ಭಂಡಾರಿಗಲ್ ಅವರು ರಚಿಸಿದ ‘ಸಂಘರ್ಷದ ಹಾದಿಯಲ್ಲಿ’ ಕೃತಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ತಿಳಿಸಿದರು.

ಸಾಹಿತಿ ಬಿ.ಜಿ.ಹುಲಿ ಕೃತಿ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಹಾಗೂ ಪ್ರಾಧ್ಯಾಪಕ ದಸ್ತಗೀರಸಾಬ್ ದಿನ್ನಿ ಕೃತಿಯ ಕುರಿತು ಮಾತನಾಡಲಿದ್ದಾರೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಭಗತ್‌ರಾಜ ನಿಜಾಮಕಾರಿ, ಪ್ರಜಾಕವಿ, ಹೋರಾಟಗಾರ ಸಿ.ದಾನಪ್ಪ ಮಸ್ಕಿ, ಸಾಹಿತಿ ರಾಮಣ್ಣ ಹವಳೆ, ಜೆ.ಎಲ್.ಈರಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಾಹಿತಿ ಬಾಬು ಭಂಡಾರಿಗಲ್, ರೇಖಾ ಬಡಿಗೇರ್ ಹಾಗೂ ವಿಜಯರಾಜೇಂದ್ರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT