ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಸಂರಕ್ಷಣೆ ಎಲ್ಲರ ಕರ್ತವ್ಯ: ಶಾಂತ ಮೊಹರೇಕರ

Last Updated 30 ನವೆಂಬರ್ 2021, 3:15 IST
ಅಕ್ಷರ ಗಾತ್ರ

ಸಿರವಾರ: ‘ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ, ವಿಜ್ಞಾನ ಹಾಗೂ ಇತಿಹಾಸದ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ’ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಶಾಂತ ಮೊಹರೇಕರ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸಂಜೆ ವೈಜ್ಞಾನಿಕ ಸಂಶೋಧನ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಡೆದ ‘ವೈಜ್ಞಾನಿಕ ಸಂಕಲ್ಪ ಸಮಾವೇಶ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಜ್ಞಾನ, ವೈಚಾರಿಕ ಮನೋಭಾವ, ಭಾವೈಕ್ಯತೆ, ದೇಶ ಪ್ರೇಮ ಬೆಳೆಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಕೇಶವ ಕಮ್ಮಾರ, ಖಜಾಂಚಿ ಪ್ರವೀಣ ಮುಗನೂರ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ ಹೆಳವರ, ನಿರ್ದೇಶಕರಾದ ಚನ್ನವೀರಯ್ಯ, ಶ್ರೀಕಾಂತ ಮೊಗವೀರ ಹಾಗೂ ರಾಮಣ್ಣ ಅವರು ಈ ವೇಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT