ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರಿನಲ್ಲಿ ಸಂಸ್ಕೃತ ವಿದ್ಯಾಪೀಠ ಶೀಘ್ರ

Last Updated 28 ಮೇ 2019, 15:06 IST
ಅಕ್ಷರ ಗಾತ್ರ

ರಾಯಚೂರು:ಸಂಸ್ಕೃತ ಅಧ್ಯಯನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಯಚೂರಿನಲ್ಲಿ ಅತಿ ಶೀಘ್ರದಲ್ಲೆ ಸಂಸ್ಕೃತ ವಿದ್ಯಾಪೀಠ ಸ್ಥಾಪಿಸಲಾಗುವುದು ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಶ್ರೀ ರಾಘವೇಂದ್ರ ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ವಿಪ್ರ ಬಾಂಧವರ ಸಭೆಯಲ್ಲಿ ಮಾತನಾಡಿದರು.

ಇದೇ ಶೈಕ್ಷಣಿಕ ವರ್ಷದಿಂದ ಪಾಠಶಾಲೆಯು ಕಾರ್ಯಾರಂಭ ಮಾಡಲಿದೆ. ಈಗಾಗಲೇ ಐದು ವಿದ್ಯಾರ್ಥಿಗಳು ಪ್ರವೇಶ ಕೋರಿ ನೋಂದಣಿ ಮಾಡಿಸಿದ್ದಾರೆ. ನಾಡಿನ ಸಂಸ್ಕೃತಿ, ಆಚಾರ, ವಿಚಾರಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಪಾಠ ಶಾಲೆಯು ತುಂಬಾ ಮಹತ್ವದ್ದಾಗಿದೆ. ವಿದ್ಯಾಪೀಠ ಆರಂಭಕ್ಕೆ ವಿಪ್ರರು ದೇಣಿಗೆ ಕೊಡಬೇಕಾದ ಅಗತ್ಯವಿಲ್ಲ. ಆದರೆ, ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ವಿಪ್ರ ಬಾಂಧವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT