ರಮೇಶ ಪಕ್ಷ ಬಿಡುವುದಿಲ್ಲ, ಬಿಜೆಪಿಗೆ ಹತಾಶೆ: ಸಚಿವ ಸತೀಶ ಜಾರಕಿಹೊಳಿ

ರಾಯಚೂರು: ಎರಡು ಮೂರು ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ರಮೇಶ್ ಜಾರಕಿಹೊಳಿ ಅವರು ಎಲ್ಲೋ ಬೇರೆ ಕಡೆಗೆ ಹೋಗಿದ್ದಾರೆ. ಸ್ವಲ್ಪ ಬೇಸರದಲ್ಲಿದ್ದಾರೆ. ಆದರೆ ಪಕ್ಷ ಬಿಡುವುದಿಲ್ಲ. ಬಿಜೆಪಿ ಹತಾಶೆಗೊಂಡಿದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಶನಿವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಕೈಬಿಡುವುದು ಸಹಜ ನಿಯಮ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾವ ಸಿಟ್ಟಿಲ್ಲ. ರಮೇಶ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ಅವರು ಇಷ್ಟ ಪಟ್ಟರೆ ನಾನೂ ಬೆಂಬಲಿಸುತ್ತೇನೆ’ ಎಂದರು.
ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಸಚಿವರ ಸಂತಾಪ ಸೂಚಿಸಿದ ಅವರು, ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದ್ದು ರಾಜ್ಯಕ್ಕೆ ನಷ್ಟವಾಗಿದೆ. ಇಂತಹ ದಕ್ಷ ಅಧಿಕಾರಿಗಳ ಅವಶ್ಯಕತೆ ಇತ್ತು ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.