ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವಸೆಲೆ ನೀರು ಸಂರಕ್ಷಿಸಿ

ವಿಶ್ವ ಜಲ ದಿನಾಚರಣೆ ಸಮಾರಂಭದಲ್ಲಿ ಸಿಇಒ ನಲಿನ್‌ ಅತುಲ್‌ ಹೇಳಿಕೆ
Last Updated 22 ಮಾರ್ಚ್ 2019, 13:46 IST
ಅಕ್ಷರ ಗಾತ್ರ

ರಾಯಚೂರು: ಅತ್ಯಮೂಲ್ಯ ಜೀವಜಲವಾದ ನೀರನ್ನು ಸಂರಕ್ಷಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಲಿನ್ ಅತುಲ್ ಕರೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ ಶುಕ್ರವಾರ ಏರ್ಪಡಿಸಿದ್ದ ‘ಜಲಾಮೃತ 2019ರ ಜಲವರ್ಷ ಸಂರಕ್ಷಣಾ ಆಂದೋಲನ ಹಾಗೂ ವಿಶ್ವ ಜಲ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೀರು ಜಲವಲ್ಲ ಅದು ಜೀವದ ಸೆಲೆ. ವಿಶ್ವದಲ್ಲಿ 1993ರಲ್ಲಿ ಪ್ರಥಮ ಬಾರಿಗೆ ವಿಶ್ವ ಜಲ ದಿನ ಆಚರಿಸಲಾಯಿತು. ಆ ಮೂಲಕ ಜಲ ಸಂರಕ್ಷಣೆ, ಜಲ ಸಾಕ್ಷರತೆ, ಜಲ ಪ್ರಜ್ಞೆ ಮತ್ತು ಹಸಿರೀಕರಣ ಮಾಡುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾಡಳಿತದಿಂದ ಜಲ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲಾಗುತ್ತಿದೆ. ರಾಜಸ್ಥಾನದ ನಂತರ ಕರ್ನಾಟಕ ಬರ ಪೀಡಿತ ರಾಜ್ಯವಾಗಿದ್ದು, ನೀರಿನ ಸಮಸ್ಯೆ ಇದೆ. ಜನರಿಗೆ ನೀರಿನ ಬಗ್ಗೆ ಅರಿವು ನೀಡುವ ಮೂಲಕ ಜಲ ಸಂರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಕಿಶೋರ್ ಬಾಬು ಮಾತನಾಡಿ, ಎಡೆದೊರೆ ನಾಡು ಎಂದೆ ಪ್ರಸಿದ್ಧಿ ಪಡೆದಿರುವ ರಾಯಚೂರು ಜಿಲ್ಲೆ ಎರಡು ನದಿಗಳನ್ನು ಹೊಂದಿದೆ. ಆದರೆ ಜಲ ಸಂರಕ್ಷಣೆ ಮಾಡುವಲ್ಲಿ ಜನರು ಜಾಗೃತರಾಗಬೇಕು. ಇದರಿಂದ ನೀರಿನ ಸಮಸ್ಯೆ ಎದುರಾಗಿದೆ. ಪ್ರತಿಯೊಬ್ಬ ವ್ಯಕ್ತಿಯಲ್ಲಿ ಜಲ ಸಂರಕ್ಷಣೆಯ ಅರಿವು ಬಂದಾಗ ಮಾತ್ರ ನೀರಿನ ಬೆಲೆ ಗೊತ್ತಾಗುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಶರತ್.ಬಿ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. 2019ರ ಲೋಕಸಭಾ ಚುನಾವಣೆ ಪ್ರಯುಕ್ತ ಅಧಿಕಾರಿಗಳಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಈ ವೇಳೆಯಲ್ಲಿ ಮತದಾರ ಸಾಕ್ಷಾರತಾ ಕ್ಲಬ್ ನೋಡಲ್ ಅಧಿಕಾರಿ ಸಂಗ್ರಹಿಸಿದ ಮತದಾನದ ಜಾಗೃತಿಯ ನುಡಿಮುತ್ತುಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ ಕೆ ನಾಯಕ, ಸಹಾಯಕ ಆಯುಕ್ತೆ ಶಿಲ್ಪಾ ಶರ್ಮಾ, ಐಎಎಸ್ ಪ್ರೋಬೇಷನರಿ ಅಧಿಕಾರಿ ನವಿನ್ ಭಟ್ ಹಾಗೂ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಮಹ್ಮದ್ ಯೂಸೂಪ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT