ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಾವಿತ್ರಿಬಾಯಿ ಫುಲೆ ಮಹಿಳಾ ಶಿಕ್ಷಣದ ಕ್ರಾಂತಿ ಜ್ಯೋತಿ’

Published 3 ಜನವರಿ 2024, 14:27 IST
Last Updated 3 ಜನವರಿ 2024, 14:27 IST
ಅಕ್ಷರ ಗಾತ್ರ

ದೇವದುರ್ಗ: ‘ಸಾವಿತ್ರಿಬಾಯಿ ಫುಲೆ ಅವರು ದೇಶದಲ್ಲಿ ಮಹಿಳಾ ಶಿಕ್ಷಣದ ಕ್ರಾಂತಿ ಜ್ಯೋತಿಯಾಗಿದ್ದಾರೆ’ ಎಂದು ಹೂಗಾರ ಸಮಾಜ ತಾಲ್ಲೂಕು ಅಧ್ಯಕ್ಷ ಮಲ್ಲಣ್ಣ ಮುಂಡರಗಿ ಹೇಳಿದರು.

ಪಟ್ಟಣದ ಎಪಿಎಂಸಿ ಹತ್ತಿರದ ಜ್ಯೋತಿಬಾ ಫುಲೆ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಂಆರ್‌ಎಸ್ಎಚ್ ರಾಜ್ಯ ಘಟಕದ ಅಧ್ಯಕ್ಷ ಶಿವರಾಯ ಅಕ್ಕರಕಿ ಮಾತನಾಡಿ, ‘ಮಹಿಳೆ ನಾಲ್ಕು ಗೋಡೆಗಳಿಂದ ಹೊರಬಂದು ವಿದ್ಯೆ ಕಲಿಯುವುದು ಅಪರಾಧವಲ್ಲ ಎನ್ನುವುದನ್ನು ಗಟ್ಟಿ ದನಿಯಲ್ಲಿ ತಿಳಿಸಿದವರು ಫುಲೆ’ ಎಂದರು.

ಬಸವರಾಜ, ಬಂದೇನವಾಜ, ಬಲಭೀಮ ಹೂಗಾರ, ಶಂಕರ ಹೂಗಾರ, ಮುರಿಗೆಪ್ಪ ಮಸರಕಲ್, ಶರಣು, ಭೋಜಪ್ಪ, ನಿಜಪ್ಪ ಹೂಗಾರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT