ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತೆದಾರರು ಸಮರ್ಪಕವಾಗಿ ಕಾರ್ಯನಿರ್ವಹಿಸಿ: ಅಂಜಿನೇಯ

Last Updated 22 ಜನವರಿ 2020, 16:18 IST
ಅಕ್ಷರ ಗಾತ್ರ

ರಾಯಚೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಗುತ್ತಿಗೆ ಕಾಮಗಾರಿಗಳನ್ನು ನೋಂದಾಯಿತ ಗುತ್ತಿಗೆದಾರರು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ಅಧಿಕಾರಿ ಅಂಜನೇಯ ಅವರು ಗುತ್ತೆದಾರರಿಗೆ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಜಲನಿರ್ಮಲ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೋಂದಾಯಿತ ಗುತ್ತಿಗೆದಾರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಎಸ್‌ಸಿ–ಎಸ್‌ಟಿ ನೋಂದಾಯಿತ ಗುತ್ತಿಗೆದಾರರು ವಿವಿಧ ಇಲಾಖೆಯ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ. ಜಿಲ್ಲೆಯ ಗುತ್ತಿಗೆದಾರರು ಸಭೆ ಉದ್ದೇಶಿಸಿ ಮಾತನಾಡಿ, ಕೆಲ ಕಾಮಗಾರಿಗಳಲ್ಲಿ ರಾಜಕೀಯ ಹಸ್ತಕ್ಷೇಪವಾಗುತ್ತಿದ್ದು ಪ್ರಥಮ ದರ್ಜೆ ಗುತ್ತಿಗೆದಾರರು ನಾಲ್ಕನೇ ದರ್ಜೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಈ ಕುರಿತು ಹಿರಿಯ ಅಧಿಕಾರಿಗಳಿಗೆ ಗಮನಕ್ಕೆ ತಂದರೆ, ಮುಂದಿನ ಕಾಮಗಾರಿ ನಮಗೆ ದೊರೆಯುವುದಿಲ್ಲ ಎನ್ನುವ ಭಯ ನಮ್ಮನ್ನು ಕಾಡುತ್ತಿದೆ’ ಗುತ್ತಿಗೆದಾರರು ಅಸಮಾಧಾನ ವ್ಯಕ್ತಪಡಿಸಿದರು.

ಲೋಕೋಪಯೋಗಿ ಇಲಾಖೆ, ಕುಡಿಯುವ ನೀರಿನ ಕಾಮಗಾರಿ ಪಂಚಾಯತ್ರಾಜ್ ಇಲಾಖೆ ಕಾಮಗಾರಿಗಳಲ್ಲಿ ಜಿಲ್ಲೆಯ ಎಸ್‌ಸಿ -ಎಸ್‌ಟಿ ನೋಂದಾಯಿತ ಗುತ್ತಿಗೆದಾರರಿಗೆ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದರು.

ಈ ಸಭೆಯಲ್ಲಿ ಜಿಲ್ಲೆಯ ಗುತ್ತಿಗೆದಾರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT