ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉನ್ನತ’ ಶಾಲೆಗಿಲ್ಲ ಮೂಲ ಸೌಕರ್ಯ

ಶಿಥಿಲಗೊಂಡ ಕೊಠಡಿಗಳು: ಭಯದ ವಾತಾವರಣದಲ್ಲಿ ಮಕ್ಕಳ ಕಲಿಕೆ
Last Updated 11 ಜೂನ್ 2022, 6:00 IST
ಅಕ್ಷರ ಗಾತ್ರ

ಗಬ್ಬೂರು (ದೇವದುರ್ಗ): ಇಲ್ಲಿನ ಉನ್ನತೀಕರಿಸಿದ ಬಾಲಕಿಯರ ಸರ್ಕಾರಿ ಪ್ರಾಥಮಿಕ ಕನ್ಯಾ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ವಿದ್ಯಾ ಕುಲಕರ್ಣಿ ಅವರು ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈಗಾಗಲೇ ಶಾಲೆಗಳು ಆರಂಭವಾಗಿ 15 ದಿನಗಳಾಗಿವೆ. ಮುಖ್ಯೋಪಾಧ್ಯಾಯರ ನಿರ್ಲಕ್ಷ್ಯದಿಂದ ಮಕ್ಕಳು ಮೊಟ್ಟೆ, ಬಾಳೆ ಹಣ್ಣು ಹಾಗೂ ಬಿಸಿ ಊಟದಿಂದ ವಂಚಿತರಾಗುತ್ತಿದ್ದಾರೆ ಎಂದು ಎಸ್‌ಡಿಎಂಸಿ ಸದಸ್ಯ ಮಾರ್ತಂಡಪ್ಪ ಆರೋಪಿಸಿದ್ದಾರೆ.

ಕಳೆದ ವರ್ಷ ಅಡುಗೆ ಸಹಾಯಕರು ಅಕ್ಕಿ ಸರಿಯಾಗಿ ಬೇಯಿಸುತ್ತಿರಲಿಲ್ಲ. ಆಹಾರಧಾನ್ಯ ಸ್ವಚ್ಛ ಮಾಡದ ಕಾರಣ ಬಿಸಿಯೂಟದಲ್ಲಿ ಹಲವು ಬಾರಿ ಹುಳುಗಳು ಪತ್ತೆಯಾಗಿದ್ದವು. ವಿದ್ಯಾರ್ಥಿಗಳು ಹೆದರಿ ಮನೆಯಿಂದ ಊಟ ತರುತ್ತಿದ್ದರು. ಈ ವರ್ಷವಾದರೂ ಈ ತರಹದ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಿ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒತ್ತಾಯಿಸಿದ್ದಾರೆ.

ಶಾಲೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಮುಂಗಾರು ಪ್ರಾರಂಭವಾಗಿದೆ. ಆದರೂ ಶಿಕ್ಷಣ ಇಲಾಖೆ ದುರಸ್ತಿ ಗೋಜಿಗೆ ಹೋಗಿಲ್ಲ.

ಶಾಲೆಯಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಇಲ್ಲ. ಪ್ರತಿದಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪರದಾಡುವ ಸ್ಥಿತಿ ಇದೆ.

‘ಶಾಲೆಯಲ್ಲಿ 460ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಭ್ಯಾಸ ಮಾಡುತ್ತಿದ್ದಾರೆ. ಶೌಚಾಲಯ ವ್ಯವಸ್ಥೆ ಕಲ್ಪಿಸುವುದು ಅಗತ್ಯ. ಹಲವು ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ’ ಎನ್ನುತ್ತಾರೆ ಗ್ರಾಮ ಪಂಚಾಯಿತಿ ಸದಸ್ಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT