ಗುರುವಾರ , ಆಗಸ್ಟ್ 18, 2022
25 °C

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕವಿತಾಳ: ನನೆಗುದಿಗೆ ಬಿದ್ದಿದ್ದ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಸೋಮವಾರ ಆರಂಭವಾಯಿತು.

6 ತಿಂಗಳುಗಳಿಂದ ಕಾಮಗಾರಿ ಸ್ಥಗಿತಗೊಂಡ ಕಾರಣ ಕೊಠಡಿಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿತ್ತು. ಈ ಕುರಿತು ‘ಪ್ರಜಾವಾಣಿ’ಯ ಜೂನ್‍ 21ರ ಸಂಚಿಕೆಯಲ್ಲಿ ‘ಕೊಠಡಿ ಕೊರತೆ ವರಾಂಡದಲ್ಲಿ ಮಕ್ಕಳಿಗೆ ಪಾಠ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ವರದಿ ಗಮನಿಸಿದ ಅಧಿಕಾರಿಗಳು ಕಾಮಗಾರಿ ಆರಂಭಕ್ಕೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

‘ಪತ್ರಿಕೆಯಲ್ಲಿ ವರದಿ ಪ್ರಕಟವಾದ ಕಾರಣ ಕಾಮಗಾರಿ ಆರಂಭವಾಗಿದೆ’ ಎಂದು ಮುಖ್ಯಶಿಕ್ಷಕ ಹನುಮಂತಪ್ಪ ನಾಯಕ ಮತ್ತು ಸಂಘಟನೆಯ ಮುಖಂಡ ನಾಗರಾಜ ಹಿಂದಿನಮನಿ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು