ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

19ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್: ಕೆ.ಡಿ.ಬಡಿಗೇರ

Published : 16 ಆಗಸ್ಟ್ 2024, 14:29 IST
Last Updated : 16 ಆಗಸ್ಟ್ 2024, 14:29 IST
ಫಾಲೋ ಮಾಡಿ
Comments

ರಾಯಚೂರು: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2024-25ನೇ ಸಾಲಿನ ಅಂತರ ವಿಭಾಗ ಮಟ್ಟದ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ ತಿಳಿಸಿದ್ದಾರೆ.

ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರೌಂಡ್ ರೋಬಿನ್‍ನಂತೆ ಇದೇ ಆ.19ರಿಂದ 27ರವರೆಗೆ ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.

19ರಂದು ಮುಖ್ಯಶಿಕ್ಷಕರ, ಹಿರಿಯ ಮುಖ್ಯಶಿಕ್ಷಕರ, ದೈಹಿಕ ಶಿಕ್ಷಣ ಶಿಕ್ಷಕರ, ವಿಶೇಷ ಶಿಕ್ಷಕರ, ಆಗಸ್ಟ್ 20ರಂದು ಪ್ರಾಥಮಿಕ ಶಾಲಾ ಸಹ ಶಿಕ್ಷಕರ, ಆ.21ರಿಂದ 27 ರ ವರೆಗೆ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವೃಂದ ಹಾಗೂ ಆ.22ರಂದು ಪ್ರೌಢಶಾಲೆಯ ವಿಶೇಷ ಶಿಕ್ಷಕರ, ದೈಹಿಕ ಶಿಕ್ಷಣ ಶಿಕ್ಷಕರ, ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ಆ.23, 27 ರಂದು ಪ್ರೌಢಶಾಲಾ ಸಹ ಶಿಕ್ಷಕರ ಕೌನ್ಸೆಲಿಂಗ್ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT