ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಶಾಲೆಗಳಿಗೆ ಜೀವಕಳೆ

ವಿಶೇಷ ರೀತಿಯಲ್ಲಿ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಕರು
Last Updated 26 ಅಕ್ಟೋಬರ್ 2021, 2:46 IST
ಅಕ್ಷರ ಗಾತ್ರ

ಸಿರವಾರ: ಸೋಮವಾರ 1 ರಿಂದ 5ನೇ ಭೌತಿಕ ತರಗತಿಗಳು ಆರಂಭವಾದವು. ವಿದ್ಯಾರ್ಥಿಗಳನ್ನು ವಿಶೇಷವಾಗಿ ಬರ ಮಾಡಿಕೊಳ್ಳಲಾಯಿತು.

ಬಲ್ಲಟಗಿ ಗ್ರಾಮದ ಉನ್ನತೀಕರಿಸಿದ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಆರತಿ ಬೆಳಗಿ, ಹೂವು ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿದರು.

ಈ ವರ್ಷದಿಂದ ಬಲ್ಲಟಗಿ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮ ತರಗತಿಗೆ ಅನುಮತಿ ನೀಡಲಾಗಿದ್ದು, ಖಾಸಗಿ ಶಾಲೆಗೂ ಮಿಗಿಲಾದ ವ್ಯವಸ್ಥೆ ಕಲ್ಪಿಸಲಾಗಿದೆ.

ನುಗಡೋಣಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಮಾದರಿಯ ಪ್ರಾಥಮಿಕ ಶಾಲೆಯ ಮುಖ್ಯ ದ್ವಾರಕ್ಕೆ ತೆಂಗಿನ ಗರಿ, ಮಾವಿನ ಎಲೆಯಿಂದ ತೋರಣ ಕಟ್ಟಿ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.

ಮುರ್ಕಿಗುಡ್ಡ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್ಲ ಕೊಠಡಿಗಳಿಗೆ ಮಾವಿನ ಎಲೆ, ತೆಂಗಿನ ಗರಿಗಳಿಂದ ಸಿಂಗರಿಸಲಾಗಿತ್ತು. ಪ್ರತಿಯೊಬ್ಬ ಮಗುವಿಗೂ ಸರತಿ ಸಾಲಿನಲ್ಲಿ ನಿಲ್ಲಿಸಿ ಸಿಹಿ ನೀಡುವ ಮೂಲಕ ಸ್ವಾಗತಿಸಲಾಯಿತು.

ಚಾಗಭಾವಿ ಕ್ಯಾಂಪ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ಬಲವಂತ ಮಹೇಂದ್ರಕರ್ ಅವರು ಮಕ್ಕಳಿಗೆ ಬಾಳೆಹಣ್ಣು, ಹೂ ನೀಡುವ ಮೂಲಕ ಸ್ವಾಗತಿಸಿದರು.

ಪ್ರತಿ ಸರ್ಕಾರಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಕಂಡು ಬಂತು.

ಕಳೆದ ಎರಡು ವರ್ಷಗಳಿಂದ ಶಾಲೆಯನ್ನೇ ಕಾಣದ ಒಂದನೇ ತರಗತಿ ಮಕ್ಕಳಿಗೆ ಹೊಸ ಲೋಕಕ್ಕೆ ಬಂದ ಅನುಭವ ಸಿಕ್ಕಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT