ಬುಧವಾರ, ಅಕ್ಟೋಬರ್ 16, 2019
27 °C

ವಿಜ್ಞಾನ ವಸ್ತು ಪ್ರದರ್ಶನ: ರಾಜ್ಯಮಟ್ಟಕ್ಕೆ ಆಯ್ಕೆ

Published:
Updated:
Prajavani

ರಾಯಚೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಯರಮರಸ್ ಸಹಯೋಗದೊಂದಿಗೆ ಶುಕ್ರವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗಾಗಿ ಜರುಗಿದ ಜಿಲ್ಲಾಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ರಾಯಚೂರು ತಾಲ್ಲೂಕಿನ ಆತ್ಕೂರ್‌ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅನಿಲಕುಮಾರ್ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ.

ಆತ್ಕೂರ್‌ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಮೊಹಮ್ಮದ್ ಅಲಿ ಅವರು ಆವರ್ತ ಕೋಷ್ಟಕದ ಧಾತುಗಳು ಮನುಕುಲದ ಮೇಲೆ ಪ್ರಭಾವ ವಿಷಯದ ಮೇಲೆ ವಿಚಾರಗೋಷ್ಠಿಯನ್ನು ಮಂಡಿಸಿ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಅತ್ಕೂರ್ ಗ್ರಾಮದ ಹಿರಿಯರು ಮುಖಂಡರು ಮತ್ತು ಶಾಲೆಯ ಮುಖ್ಯಗುರುಗಳು, ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Post Comments (+)