ರಾಯಚೂರು: ದೆಹಲಿಯಲ್ಲಿ ನಡೆದ ಮಹಿಳಾ ಸಿವಿಲ್ ಡೆಫೆನ್ಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರಗಳು ಎಗ್ಗಿಲ್ಲದೇ ನಡೆಯುತ್ತಿದ್ದು ಪ್ರತಿದಿನ ₹3ರಿಂದ ₹4ಲಕ್ಷ ಭ್ರಷ್ಟಾಚಾರದ ಹಣವನ್ನು ಠೇವಣಿ ನೀಡಲಾಗುತ್ತಿತ್ತು. ಇಂತಹ ಹಣವನ್ನು ಇಡಲು ರಹಸ್ಯ ಇರಲಿಲ್ಲ. ಇಂತಹ ಅನೇಕ ಸಂಗತಿಗಳನ್ನು ಮರೆಮಾಚಲು ಹತ್ಯೆ ಮಾಡಲಾಗಿದೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.
ಆಕೆಯ ಅಕ್ರಮ ಸಂಬಂಧದ ಕಾರಣಕ್ಕಾಗಿ ಆಕೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂಬ ಶರಣಾದ ಆರೋಪಿಯ ಹೇಳಿಕೆಯನ್ನು ಮಾತ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬ ಮಾಡಿರುವ ಆರೋಪಗಳ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದೂರಿದರು.
ಕೇಂದ್ರದಲ್ಲಿ ಪ್ಯಾಸಿಸ್ಟ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಮಹಿಳೆಯರ ಘನತೆ ಗೌರವ ಮತ್ತು ಸುರಕ್ಷತೆಯ ಅಪಾಯದಲ್ಲಿದೆ. ಈ ಪ್ರಕರಣವನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಿ ಹಿಂದಿನ ಹಿಂದಿನ ರಹಸ್ಯವನ್ನು ಭೇದಿಸಬೇಕು ಎಂದು ಒತ್ತಾಯಿಸಿದರು.
ಘಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿಲಾನಿ ಪಾಷಾ ಉಪಾಧ್ಯಕ್ಷ ಮಹಮ್ಮದ್ ಮತೀನ್ ಅನ್ಸಾರಿ, ಮಹಮ್ಮದ್ ತೌಸಿಫ್ ಅಹಮದ್, ಶೇಕ್ ದಾವೂದ್, ಸೈಯದ್ ಬುರ್ಹಾನ್, ಸೈಯದ್ ಇರ್ಫಾನ್, ಮಹಮ್ಮದ್ ಶಫಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.