ಮಂಗಳವಾರ, ಮೇ 24, 2022
30 °C

ಕೋವಿಶಿಲ್ಡ್ ಲಸಿಕೆ: ಎರಡನೇ ಹಂತದ ಲಸಿಕೆ ವಿತರಣೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಎರಡನೇ ಹಂತದ ಫಲಾನುಭವಿಗಳಿಗೆ ಕೋವಿಶಿಲ್ಡ್ ಲಸಿಕೆಯನ್ನು ನೀಡುವುದಕ್ಕೆ ಸೋಮವಾರ ಚಾಲನೆ ನೀಡಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತನ್ವೀರ್ ಆಸೀಫ್ ಅವರು ರಿಮ್ಸ್ ಆಸ್ಪತ್ರೆಯಲ್ಲಿ ಪ್ರಥಮವಾಗಿ ಲಸಿಕೆ ಪಡೆದರು. 

ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಹಂತದಲ್ಲಿ ಲಸಿಕೆ ನೀಡಲಾಗುವುದು.

ಈ ಹಂತದಲ್ಲಿ ಒಟ್ಟು 5,500 ಹೆಸರುಗಳನ್ನು ನೋಂದಣಿ ಮಾಡಲಾಗಿದೆ. ಮೊದಲ ಹಂತದಲ್ಲಿ 15,300 ಕೋವಿಡ್ ವಾರಿಯರ್ಸ್‌ ಗಳಿಗೆ‌ ಲಸಿಕೆ ನೀಡಿಕೆ ಆರಂಭಿಸಲಾಗಿದ್ದು, ಅದು ಕೂಡಾ ಪ್ರಗತಿಯಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು