ರಾಜ್ಯದ ಅಭಿವೃದ್ಧಿ ಹಿರಿಯರ ಮಾರ್ಗದರ್ಶನ ಅಗತ್ಯ: ಎನ್.ಎಸ್.ಬೋಸರಾಜು

7
ಹಿರಿಯ ನಾಗರಿಕರ ದಿನಾಚರಣೆ

ರಾಜ್ಯದ ಅಭಿವೃದ್ಧಿ ಹಿರಿಯರ ಮಾರ್ಗದರ್ಶನ ಅಗತ್ಯ: ಎನ್.ಎಸ್.ಬೋಸರಾಜು

Published:
Updated:
Deccan Herald

ರಾಯಚೂರು: ಸಮಾಜ ಹಾಗೂ ರಾಜ್ಯದ ಅಭಿವೃದ್ಧಿಗೆ ಹಿರಿಯ ಮಾರ್ಗದರ್ಶನ ಅತ್ಯಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಹೇಳಿದರು.

ನಗರದ ಕನ್ನಡಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುರಕ್ಷಾ ಸಂಸ್ಥೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಿಂದ ಸೋಮವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಹಿರಿಯ ಮಾರ್ಗದರ್ಶನಗಳು ಪಡೆಯದವರು ಜೀವನದಲ್ಲಿ ಮುಂದೆ ಬರುವುದು ಕಷ್ಟದಾಯಕವಾಗಿದ್ದು, ಯಶಸ್ಸು ಸಾಧಿಸಬೇಕಾದರೆ ಹಿರಿಯರ ಮಾರ್ಗದರ್ಶನ ಪಡೆಯಲೇಬೇಕು ಎಂದರು.

ಹಿರಿಯ ನಾಗರಿಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ನೀಡಿ ಸನ್ಮಾನಿಸಿರುವುದು. ಅವರಿಗೆ ಗುರುತಿನ ಚೀಟಿ ಉಚಿತವಾಗಿ ನೀಡಿರುವುದು ಶ್ಲಾಘನೀಯ ಕಾರ್ಯ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್. ನಾಗರಾಜ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಹಿರಿಯ ನಾಗರಿಕರು ಮಾರ್ಗದರ್ಶನ ಮಾಡುವುದರಿಂದ ಅಂತಹ ಯುವಕರನ್ನು ಸರಿದಾರಿಗೆ ತರಲು ಸಹಕಾರಿಯಾಗಲಿದೆ ಎಂದು ಹೇಳಿದರು.

ನಿವೃತ್ತ ನೌಕರರ ಸಂಘದ ಅಧ್ಯಕ್ಷ ಹಂಚಿನಾಳ ಮಹಾದೇವಪ್ಪ, ನಗರಸಭೆ ಸದಸ್ಯರಾದ ಜಯಣ್ಣ, ದರೂರು ಬಸವರಾಜ, ಕಾಂಗ್ರೆಸ್ ಮುಖಂಡ ಕೆ.ಶಾಂತಪ್ಪ, ಜಿಲ್ಲಾ ಯುವಜನ ಸೇವಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುಸ್ವಾಮಿ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶ್ರೀದೇವಿ, ಪವನ್ ಪಾಟೀಲ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !