ಸೋಮವಾರ, ಮೇ 23, 2022
28 °C

ಸೇವಾಲಾಲ್ ಮಹಾರಾಜ ಜಯಂತಿ ಸರಳ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತಿಯನ್ನು ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಮಾರಂಭ ಆಯೋಜಿಸಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವಿ. ನಾಯ್ಕ ಅವರು ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಮಾಲಾರ್ಪನೆ ಮಾಡಿ ನಮನ ಸಲ್ಲಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ್, ಬಂಜಾರಾ ಸಮಾಜದ ಮುಖಂಡರಾದ ನಾರಾಯಣ ನಾಯಕ, ಹನುಮಂತು ಚೌಹಾಣ್, ಶಿವಣ್ಣ ಪವಾರ್, ಶಂಕರ್ ನಾಯಕ, ರಂಗಮ್ಮ, ಜೀವಲಾಲ್ ನಾಯಕ, ಅಮರೇಶ ರಾಠೋಡ್, ನಾಗರೆಡ್ಡಿ ರಾಠೋಡ್, ಗೋವಿಂದ ರಾಠೋಡ್, ಕೃಷ್ಣ ನಾಯಕ, ಕಿಷ್ಟಪ್ಪ ಪವರ್ ಮತ್ತಿತರರು ಇದ್ದರು.

ರಾಯಚೂರು ಕೃಷಿ ವಿಶ್ವವಿದ್ಯಾಲಯ: ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು.

ಕುಲಪತಿ ಡಾ.ಕೆ.ಎನ್. ಕಟ್ಟಿಮನಿ, ಶಿಕ್ಷಣ ನಿರ್ದೇಶಕ ಡಾ.ಎಂ.ಜಿ ಪಾಟೀಲ್ ಮತ್ತು ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳು, ಅಧಿಕಾರಿಗಳು ಸಂತ ಸೇವಾಲಾಲರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ವ್ಯವಸ್ಥಾಪನಾ ಮಂಡಳಿಯ ಸದಸ್ಯ ತ್ರಿವಿಕ್ರಮ ಜೋಷಿ ಮಾತನಾಡಿದರು. ಕೊಟ್ರೇಶಪ್ಪ ಕೊರೆ ಅವರು ಸಂತ ಸೇವಾಲಾಲ ಅವರ ಜೀವನ ಚರಿತ್ರೆಯನ್ನು ತಿಳಿಸಿದರು. ಕುಲಪತಿ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು