ಡೆಂಗಿ ಪ್ರಕರಣ ನಿಯಂತ್ರಿಸಲು ಎಲ್ಲಾ ಗ್ರಾಮ ಪಂಚಾಯಿತಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಆದರೂ ಕೂಡ ಇಂದಿನವರೆಗೂ ಮನ್ಸಲಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯ ಮುಂದುವರೆದರೆ ಮುಂದಾಗುವ ಅನಾಹುತಗಳಿಗೆ ಸಂಬಂಧಿಸಿದವರು ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.