ರಾಯಚೂರು: ನಗರದ ಮಹಿಳಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2019ರಲ್ಲಿ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ಪೋಸ್ಕೊ ವಿಶೇಷ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದೆ.
ಅಪರಾಧಿ ರಾಯಚೂರು ತಾಲ್ಲೂಕಿನ ಆಶಾಪೂರು ಗ್ರಾಮದ ಮಲ್ಲಿಕಾರ್ಜುನ ಮುನಿನಾಯಕನಿಗೆ ಶಿಕ್ಷೆ ವಿಧಿಸಿ ನ್ಯಾಯಾಧೀಶ ಪ್ರಭು ಹತ್ತಿಕಾಳ ತೀರ್ಪು ನೀಡಿದ್ದಾರೆ.
ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಇಕ್ಕಳಕಿ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ. ಮಂಜುನಾಥ ವಾದ ಮಂಡಿಸಿದ್ದರು.