ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ನೆರವಿಗೆ ಆಗ್ರಹಿಸಿ ಪ್ರತಿಭಟನೆ

Last Updated 30 ಏಪ್ರಿಲ್ 2021, 13:20 IST
ಅಕ್ಷರ ಗಾತ್ರ

ಕವಿತಾಳ:‘ಸರ್ಕಾರ ಸರ್ವರಿಗೂ ಉಚಿತವಾಗಿ ಕೊವಿಡ್‍ ಲಸಿಕೆ ನೀಡಬೇಕು. ಬಡ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸಬೇಕು’ ಎಂದು ಎಸ್‌ಎಫ್‌ಐ ರಾಜ್ಯ ಘಟಕದ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ ಆಗ್ರಹಿಸಿದರು.

ಎಸ್‌ಎಫ್‌ಐ ಪ್ರತಿಭಟನೆ ನಡೆಸಲು ಕರೆ ನೀಡಿದ ಕಾರಣ ಪಟ್ಟಣದಲ್ಲಿ ಶುಕ್ರವಾರ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ‘ಕೊವಿಡ್‍ ಸೋಂಕಿತರಿಗೆ ಆಕ್ಸಿಜನ್‍, ರೆಮ್‌ಡಿಸಿವಿರ್ ಚುಚ್ಚುಮದ್ದು, ವೆಂಟಿಲೇಟರ್ ಹಾಗೂ ಹಾಸಿಗೆ ಕೊರತೆಯಾಗದಂತೆ ಸರ್ಕಾರ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪರಿಸ್ಥಿತಿ ಉಲ್ಬಣಿಸಿದೆ. ಲಕ್ಷಾಂತರ ಜನರನ್ನು ಒಂದೆಡೆ ಸೇರಿಸಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದ ರಾಜಕೀಯ ನಾಯಕರು ಇದೀಗ ಕೊರೊನಾ ನಿಯಂತ್ರಣ ನೆಪದಲ್ಲಿ ಲಾಕ್‌ಡೌನ್‌ ಮಾಡಿ ಬಡ ಕುಟುಂಬಗಳನ್ನು ಬೀದಿಗೆ ತಂದಿದ್ದಾರೆ’ ಎಂದು ಆರೋಪಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಲಿಂಗರಾಜ ಕಂದಗಲ್, ನಗರ ಘಟಕದ ಅಧ್ಯಕ್ಷ ಮೌನೇಶ ಬುಳ್ಳಾಪುರ, ಕಾರ್ಯದರ್ಶಿ ವೆಂಕಟೇಶ, ಮುಖಂಡರಾದ ನಾಗ್ ಮೋಹನ್‍ ಸಿಂಗ್, ಮಲ್ಲಿಕಾರ್ಜುನ, ಬಿ.ಗಣೇಶ ಮತ್ತು ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT