ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಖವಾದಿ: ಸಾಂಕ್ರಾಮಿಕ ರೋಗ ಭೀತಿ

ಸಮರ್ಪಕವಾಗಿ ಕಸ ವಿಲೇವಾರಿಗೆ ಜನರ ಒತ್ತಾಯ
Last Updated 19 ಡಿಸೆಂಬರ್ 2019, 9:14 IST
ಅಕ್ಷರ ಗಾತ್ರ

ಶಕ್ತಿನಗರ: ರಾಯಚೂರು ತಾಲ್ಲೂಕಿನ ಶಾಖವಾದಿ ಗ್ರಾಮದಲ್ಲಿ ಎತ್ತ ನೋಡಿದರತ್ತ ತಿಪ್ಪೆಗುಂಡಿಗಳ ರಾಶಿ ಕಾಣಸಿಗುತ್ತದೆ. ದುರ್ವಾಸನೆ ಹರಡಿದ್ದು, ಜನರು ಮೂಗು ಮುಚ್ಚಿಕೊಡು ಓಡಾಡಬೇಕಿದೆ.

ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ. ಜನರು ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದರಿಂದ ಅಲ್ಲಲ್ಲಿ ತಿಪ್ಪೆಗುಂಡಿಗಳು ನಿರ್ಮಾಣವಾಗಿವೆ.ಇದರಿಂದ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ಕಾಯಿಲೆ ಭೀತಿ ಎದುರಾಗಿದೆ.ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಸ ವಿಲೇವಾರಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.

ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳು ಚರಂಡಿಗಳಲ್ಲಿ ಸಂಗ್ರಹವಾಗಿ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಕೊಳಚೆ ನೀರು ಸಂಗ್ರಹವಾಗಿ ದುರ್ನಾತ ಬೀರುತ್ತಿದೆ. ಜನಪ್ರತಿನಿಧಿಗಳು ಸಹ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಜನರ ಸಂಕಟ ಕೇಳುವವರಿಲ್ಲ ಎಂದು ನಿವಾಸಿಗಳು ಅಳಲು ತೊಡಿಕೊಂಡರು.

ಗ್ರಾಮದಲ್ಲಿ ಅಗತ್ಯ ಮೂಲಕಸೌಕರ್ಯಗಳಿಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದಕ್ಕೆ ಕಡಿವಾಣ ಹಾಕಿ ಸ್ವಚ್ಛತೆ ಕಾಪಾಡಬೇಕು ಎಂದು ಗ್ರಾಮಸ್ಥ ಮಲ್ಲೇಶ ಒತ್ತಾಯಿಸಿದರು.ಕಸ ವಿಲೇವಾರಿ ಮಾಡಲು ಎರಡು ಎಕರೆ ಜಾಗ ಗುರುತಿಸಲಾಗಿದೆ. ಜನರು ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡಬೇಕು. ಕಸ ಸಮಸ್ಯೆ ನಿವಾರಣಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಖವಾದಿ ಗ್ರಾಮ ಪಂಚಾಯಿತಿ ಪಿಡಿಒ ಅಣ್ಣರಾವ್ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT