ಶನಿವಾರ, ಮಾರ್ಚ್ 28, 2020
19 °C

ಶೆಟಲ್‌ ಬ್ಯಾಡ್ಮಿಂಟನ್‌: ರಾಜ್ಯ ಮಟ್ಟಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್‌) ದಯಾನಂದ ಆಂಗ್ಲೋ ವೇದಿಕೆಯ (ಡಿಎವಿ) ಪಬ್ಲಿಕ್‌ ಶಾಲೆಯ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.

ವಿಭಾಗ ಮಟ್ಟದ ಶೆಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ವಿದ್ಯಾರ್ಥಿನಿ ಸ್ನೇಹಾ, ಶ್ರೇಯಾ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

200 ಮೀ ಓಟದ ಸ್ಪರ್ಧೆಯಲ್ಲಿ ಸಿಂಧೂ ಪ್ರಥಮ, 400 ಮೀ.ಓಟದ ಸ್ಪರ್ಧೆಯಲ್ಲಿ ಪ್ರೀತಿ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಮುಖ್ಯಗುರು ವಿಜಯಕುಮಾರ ಅವರು ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ನರಸಿಂಹ, ರವಿಕುಮಾರ ಹಾಗೂ ಶಿಕ್ಷಕ ವೃಂದ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು