ಉಪ ತಹಶೀಲ್ದಾರ್ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ದುರಗಪ್ಪ ನಾಯಕ, ‘ಸ್ಥಳೀಯರಿಗೆ ಸೇರಿದ ಮೂರು ಹಸುಗಳನ್ನು ಚಿರತೆ ಕೊಂದು ಹಾಕಿದೆ. ಅವುಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು. ಮಂಗಗಳನ್ನು ಬೇರೆ ಕಡೆ ಸೆರೆಹಿಡಿದು ಪಟ್ಟಣದ ಸುತ್ತಮುತ್ತ ಬಿಟ್ಟು ಹೋಗಿರುವ ಕಾರಣ ಮಂಗಳ ಸಂಖ್ಯೆ ವ್ಯಾಪಕವಾಗಿ ಹೆಚ್ಚಿದೆ. ರೈತರು ಬೆಳೆದ ವಿವಿಧ ಬೆಳೆಗಳನ್ನು ಮಂಗಳಗಳು ಹಾಳು ಮಾಡುತ್ತಿವೆ. ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಮಂಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆಹಿಡಿದು ಬೇರೆ ಕಡೆ ಸಾಗಿಸಬೇಕು’ ಎಂದು ಒತ್ತಾಯಿಸಿದರು.