ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 14ರ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಭಾಗವಹಿಸಲಿದ್ದಾರೆ.

ಅತಿಥಿಗಳ ವಿವರ:

ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕ ಜೆ.ಟಿ.ಪಾಟೀಲ್, ಸಂಸದರಾದ ಜಿ.ಕುಮಾರ ನಾಯಕ, ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಾಮಯ್ಯ ಮುರಾರಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್, ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶಕುಮಾರ ಸಿಂಗ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಜಹೀರಾ ನಸೀಮ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮಾನ್ವಿ ಬಾಷಿಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಅಧ್ಯಾಪಾಕ ಡಾ.ಬಸವರಾಜ ಸುಂಕೇಶ್ವರ ಅವರು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.