ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಲಯದಲ್ಲಿ ಬೃಹತ್‌ ಶೋಭಾ ಯಾತ್ರೆ

Published 22 ಜನವರಿ 2024, 7:48 IST
Last Updated 22 ಜನವರಿ 2024, 7:48 IST
ಅಕ್ಷರ ಗಾತ್ರ

ರಾಯಚೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಆಂಧ್ರಪ್ರದೇಶ ಕರ್ನೂಲ್ ಜಿಲ್ಲೆಯ ಮಂತ್ರಾಲಯದಲ್ಲಿ ಸೋಮವಾರ ಬೃಹತ್‌ ಶೋಭಾಯಾತ್ರೆ ನಡೆಯಿತು.

ಶ್ರೀರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಆಯೋಜಿಸಿದ್ದ ಶೋಭಾ ಯಾತ್ರೆಗೆ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು.

ಶ್ರೀಮಠದ ಯೋಗೀಂದ್ರ ಸಭಾಮಂಟಪದಿಂದ ಆರಂಭವಾದ ಯಾತ್ರೆ ಶ್ರೀಮಂಚಾಲಮ್ಮ ಸನ್ನಿಧಿ, ಪಂಚಮುಖಿ ದರ್ಶನ, ಶ್ರೀವೆಂಕಟೇಶ್ವರ ಸ್ವಾಮಿ, ರಾಮಲಿಂಗೇಶ್ವರ ಸ್ವಾಮಿ ದೇವಾಲಯ, ಸಂಸ್ಕೃತ ವಿದ್ಯಾಪೀಠ, ಸ್ಟೇಟ್‌ ಬ್ಯಾಂಕ್, ಸುಜಯೀಂದ್ರನಗರ, ನಾಗಲದಿನ್ನೆ ರಸ್ತೆ, ರಾಮಚಂದ್ರನಗರ, ಬಸ್‌ ನಿಲ್ದಾಣ, ರಾಘವೇಂದ್ರಪುರ, ಸುಶಮೀಂದ್ರ ಪಾರ್ಕ್, ರಾಘವೇಂದ್ರ ಸರ್ಕಲ್ ಮಾರ್ಗವಾಗಿ ಶ್ರೀಮಠದ ಮುಖ್ಯದ್ವಾರದಿಂದ ಶ್ರೀಮಠಕ್ಕೆ ಬಂದು ಸಮಾರೋಪಗೊಂಡಿತು.

ಮುಸ್ಲಿಂ ಮುಖಂಡರು ಸಹ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ರಾಮಧ್ವಜ ಹಿಡಿದು ಗಾಳಿಯಲ್ಲಿ ತೇಲಿಸಿದರು. ಜೈಶ್ರೀರಾಮ ಎಂದು ಬರೆಯಲಾದ ಕೇಸರಿ ಧ್ವಜಗಳನ್ನು ಹಿಡಿದ ಯುವಕರು ಹಾಗೂ ಭಕ್ತರು ಜಯಘೋಷ ಮೊಳಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT