ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ | ಸಿದ್ಧಗಂಗಾಶ್ರೀ ಪುಣ್ಯಸ್ಮರಣೆ: ಐದು ಸಾವಿರ ಜನಕ್ಕೆ ದಾಸೋಹ

Published 21 ಜನವರಿ 2024, 15:35 IST
Last Updated 21 ಜನವರಿ 2024, 15:35 IST
ಅಕ್ಷರ ಗಾತ್ರ

ಮಸ್ಕಿ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 5ನೇ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ಪಟ್ಟಣದ ದೈವದಕಟ್ಟೆ ಗೆಳೆಯರ ಬಳಗದಿಂದ ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರದ ಮೆರವಣಿಗೆ ಹಾಗೂ ದಾಸೋಹ ಕಾರ್ಯಕ್ರಮ ನಡೆಯಿತು.

ಸಂಜೆ 5 ಗಂಟೆಗೆ ದೈವದಕಟ್ಟೆ ಮೇಲೆ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಬಳಗಾನೂರಿನ ಮರಿಸ್ವಾಮಿಮಠದ ಸಿದ್ಧಬಸವ ಸ್ವಾಮೀಜಿ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಸಕ ಆರ್.ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಸೇರಿ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ವಿಶೇಷವಾಗಿ ಅಲಂಕೃತ ಮಾಡಲಾಗಿದ್ದ ವಾಹನದಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಇಟ್ಟು ಮೆರವಣಿಗೆ ಮಾಡಲಾಯಿತು.

ಅಗಸಿ, ಅಶೋಕ ವೃತ್ತ, ಕಿತ್ತೂರು ಚೆನ್ನಮ್ಮ ವೃತ್ತ, ಕನಕ ವೃತ್ತ ಹಾಗೂ ರಥ ಬೀದಿ ಮೂಲಕ ಸಾಗಿ ದೈವದ ಕಟ್ಟೆಗೆ ಆಗಮಿಸಿತು.

ಡೊಳ್ಳು ಕುಣಿತ, ಹಗಲು ವೇಷಗಾರರು ಸೇರಿ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

ದೈವದಕಟ್ಟೆ ಮುಂಭಾಗದ ರಸ್ತೆಯಲ್ಲಿ ಸಾಮೂಹಿಕ ದಾಸೋಹ ನಡೆಸಲಾಯಿತು.

ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ದಾಸೋಹದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT