ಬುಧವಾರ, ಮೇ 25, 2022
29 °C

ನಿರುದ್ಯೋಗದ ವಿರುದ್ಧ ಸಹಿ ಸಂಗ್ರಹ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಒ), ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯ ಪದಾಧಿಕಾರಿಗಳು ನಗರದ ತಹಶೀಲ್ದಾರ್ ಕಚೇರಿ ಮುಂದೆ ನಿರುದ್ಯೋಗದ ವಿರುದ್ಧ ಸೋಮವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ದೇಶದಲ್ಲಿ ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು. ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕು ಎಂದು ಘೋಷಿಸಬೇಕು ಎಂಬ ಬೇಡಿಕೆ ಇಟ್ಟುಕೊಂಡು ಪ್ರಧಾನ ಮಂತ್ರಿಗೆ ಮನವಿ ರವಾನಿಸಿದರು.

ಸಂಘಟನೆಯ ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಅಭಿಯಾನ ಕೈಗೊಂಡಿತ್ತು. ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಯುವಕರು, ಪ್ರಗತಿಪರ ಸಂಘಟನೆಗಳ ಮುಖಂಡರು ಸಹಿಮಾಡಿದರು.

ಹೋರಾಟಗಾರ ಡಾ.ವಿಠ್ಠಲ ಉದಗಟ್ಟಿ, ಜಾನ್ ವೆಸ್ಲಿ, ಖಾಜಾ ಅಸ್ಲಂ, ದಯಾನಂದ, ಅಣ್ಣಪ್ಪ, ಅಭಯ, ಮದ್ಯಪಾನ ನಿಷೇಧ ಆಂದೋಲನದ ವಿದ್ಯಾ ಪಾಟೀಲ್, ಮೋಕ್ಷಮ್ಮ, ವಿರುಪಮ್ಮ, ಎಐಡಿಎಸ್ಒ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಕಾರ್ಯದರ್ಶಿ ಮಲ್ಲನಗೌಡ, ವಿನೋದ ಕುಮಾರ, ಬಡೇಸಾಬ್, ಹುಸೇನ್ ಭಾಷಾ, ಯಲ್ಲಪ್ಪ, ಅಭಿಲಾಷ್, ಮಲ್ಲನಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು