ಸಿಂಧನೂರು: ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ಹಾಗೂ ಮಾನವ ಹಕ್ಕುಗಳು ಹಿತರಕ್ಷಣಾ ಸಂಸ್ಥೆ ವತಿಯಿಂದ ಕೊಡುವ ರಾಜ್ಯ ಮಟ್ಟದ ‘ಕಾಯಕ ರತ್ನ ಪ್ರಶಸ್ತಿ’ಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯ ಸಿಂಧನೂರು ತಾಲ್ಲೂಕು ಘಟಕದ ಅಧ್ಯಕ್ಷ ಸಂಗಮೇಶ ಹಿರೇಮಠ ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.
ಬುಧವಾರ ಹೇಳಿಕೆ ನೀಡಿರುವ ಅವರು ‘ಸಂಗಮೇಶ ಹಿರೇಮಠ ಕನ್ನಡ ಸಂಘಟನೆ, ಸಾಮಾಜಿಕ ಚಟುವಟಿಕೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಗಸ್ಟ್ 6 ರಂದು ಬೆಳಿಗ್ಗೆ 10 ಗಂಟೆಗೆ ರಾಯಚೂರಿನಲ್ಲಿ ನಡೆಯುವ ಕನ್ನಡ ಸಿರಿವಂತಿಕೆ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.