ಸಿಂಧನೂರು: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ರಾಯಚೂರು ಹಾಗೂ ತಂಬಾಕು ನಿಯಂತ್ರಣ ವಿಭಾಗ ಸಿಂಧನೂರು ಸಂಯುಕ್ತಾಶ್ರಯದಲ್ಲಿ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ವಿಶ್ವ ತಂಬಾಕು ರಹಿತ ದಿನ ಅಂಗವಾಗಿ ತಂಬಾಕು ಮತ್ತು ನಿಕೋಟಿನ್ ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಜಾಥಾ ನಡೆಸಲಾಯಿತು.

ಜಾಥಾಕ್ಕೆ ಚಾಲನೆ ನೀಡಿದ ಆಯುಷ್ ವೈದ್ಯ ಡಾ.ಮಂಜುನಾಥ ಅಣಗೌಡರ್ ಮಾತನಾಡಿ, ‘ಆಕರ್ಷಣೆಯ ಮುಖವಾಡ ಕಳಚಿ: ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಹತ್ತಿಕ್ಕಿ’ ಎಂಬ ವಿಶ್ವ ಸಂಸ್ಥೆಯ ಅಧಿಕೃತ ಧ್ಯೇಯವಾಕ್ಯ ಅಡಿಯಲ್ಲಿ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ತಂಬಾಕು ಕಂಪನಿಗಳು ಆಕರ್ಷಕ ಪ್ಯಾಕೇಜಿಂಗ್ ಮತ್ತು ಆಧುನಿಕ ಜಾಹೀರಾತುಗಳ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿದ್ದು, ಅದರ ನೈಜ ಆಕರ್ಷಣೆಯ ಮುಖವಾಡವನ್ನು ಕಳಚಿ ಯುವಕರನ್ನು ವ್ಯಸನದಿಂದ ಮುಕ್ತಗೊಳಿಸುವುದು ಈ ಬಾರಿಯ ಮುಖ್ಯ ಉದ್ದೇಶವಾಗಿದೆ’ ಎಂದರು.

ಹಿರಿಯ ಆರೋಗ್ಯ ನಿರೀಕ್ಷಕ ರಂಗನಾಥ ಗುಡಿ,ಎನ್ಸಿಡಿ ಡಾ.ಸರೋಶ ಪಾಟೀಲ್ ಮಾತನಾಡಿದರು.

ನಂತರ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಆಸ್ಪತ್ರೆಯ ಮುಂಭಾಗದಲ್ಲಿ ತಂಬಾಕು ವಿರೋಧಿ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸುವ ಮೂಲಕ ಗಾಂಧಿ ವೃತ್ತ, ಬಸ್ ನಿಲ್ದಾಣ, ಬಸವೇಶ್ವರ ಸರ್ಕಲ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಸೆಳೆದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಂಗನಗೌಡ, ವಿಬಿಡಿಟಿಎಸ್ ತಾಲ್ಲೂಕು ಮೇಲ್ವಿಚಾರಕ ಎಫ್.ಎ.ಹಣಗಿ, ಕ್ಷಯ ರೋಗದ ಮೇಲ್ವಿಚಾರಕ ಯಮನೂರ, ಎನ್ಸಿಡಿ ಸಿಬ್ಬಂದಿ ಮುತ್ತಮ್ಮ, ಗಾಯಿತ್ರಿ, ಸೇರಿದಂತೆ ಶುಶ್ರೂಷಕರು, ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-1982995595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.