ಸಿಂಧನೂರು: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಾಲಯ ರಾಯಚೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಡೆಂಗಿ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಹೃದಯರೋಗ ತಜ್ಞ ಡಾ.ಹನುಮಂತ ರೆಡ್ಡಿ ಶನಿವಾರ ಸ್ಥಳೀಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟೈ ಸೊಳ್ಳೆಯಿಂದ ಡೆಂಗಿ ರೋಗ ಹರಡುತ್ತದೆ. ತೀವ್ರ ಜ್ವರ, ತಲೆನೋವು, ಕಣ್ಣಿನ ಹಿಂಭಾಗದ ನೋವು ಹಾಗೂ ಕೀಲು ನೋವು ಇದರ ಪ್ರಮುಖ ಲಕ್ಷಣಗಳಾಗಿವೆ. ಭಾರತ ದೇಶದಾದ್ಯಂತ ಪ್ರತಿವರ್ಷ ಮೇ16 ರಂದು ರಾಷ್ಟ್ರೀಯ ಡೆಂಗಿ ದಿನ ಆಚರಿಸಲಾಗುತ್ತಿದ್ದು, ಈ ವರ್ಷ ‘ಪರೀಕ್ಷಿಸಿ, ಸ್ವಚ್ಛಗೊಳಿಸಿ, ಮುಚ್ಚಿ, ಡೆಂಗಿ ಸೋಲಿಸಲು ಕ್ರಮಗಳು’ ಎಂಬ ಧ್ಯೇಯವಾಕ್ಯದೊಂದಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಡಾ.ಮಂಜುನಾಥ ಅಣಗೌಡರ್, ಕಿವಿ, ಮೂಗು ಮತ್ತು ಗಂಟಲು ತಜ್ಞ ಡಾ.ರವಿ ಮಾತನಾಡಿ ಡೆಂಗಿ ರೋಗದ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.

ತಾಲ್ಲೂಕು ಮೇಲ್ವಿಚಾರಕ ಎಫ್.ಎ.ಹಣಗಿ ಮಾತನಾಡಿ, ‘ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ನಡೆಸುತ್ತಿದ್ದು ಅವಶ್ಯ ಅನಿಸಿದರೆ ಫಾಗಿಂಗ್ ಪ್ರಕ್ರಿಯೆಗಳಿಗೂ ಚಾಲನೆ ನೀಡಲಾಗುವುದು. ಸಾರ್ವಜನಿಕರು, ಸಮುದಾಯದ ಸಹಭಾಗಿತ್ವದೊಂದಿಗೆ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟುವ ಮೂಲಕ ಡೆಂಗಿ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದರು.

ತಾಲ್ಲೂಕು ತಂಡದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಂಗನಾಥ ಗುಡಿ, ಸಂಗನಗೌಡ ಪಾಟೀಲ, ಎನ್ಸಿಡಿಯ ಮುತ್ತಮ್ಮ, ಸುಮಾ, ಸನ್ರೈಸ್ ಕಾಲೇಜಿನ ಪ್ರಾಂಶುಪಾಲ ಲಾಜರ್ ಸಿರಿಲ್, ಸಿಬ್ಬಂದಿ ವೀರೇಶ್ವರಿ, ನಗರ ಆರೋಗ್ಯ ಕೇಂದ್ರದ ಶಾಂತಮ್ಮ, ಪಿಎಚ್ಸಿಒ ಕಿರಿಯ ಆರೋಗ್ಯ ನಿರೀಕ್ಷಕ ಹನುಮಂತ, ಮಲೇರಿಯಾ ಲಿಂಕ್ ಸಿಬ್ಬಂದಿ ಮಲ್ಲಪ್ಪ ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆಯರ ತಂಡ ಮತ್ತು ಸನ್ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿ ಪ್ಲೇಕಾರ್ಡ್ಗಳನ್ನು ಹಿಡಿದು ಘೋಷಣೆ ಕೂಗಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-32-1871995312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.