ಸಿಂಧನೂರು: ‘ಸಿಂಧನೂರನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ತಾಲ್ಲೂಕು ಘಟಕದಿಂದ ಮಾ.31 ರಂದು ನಗರದ ಮಿನಿವಿಧಾಸೌಧ ಕಚೇರಿಯ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಸೇನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಉಮೇಶಗೌಡ ಅರಳಹಳ್ಳಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು‘ಸಿಂಧನೂರು ಜಿಲ್ಲೆಯಾಗಲು ಆಡಳಿತಾತ್ಮಕ ಮತ್ತು ಭೌಗೋಳಿಕ ದೃಷ್ಟಿಯಿಂದ ಸೂಕ್ತ ಮತ್ತು ಯೋಗ್ಯವಾಗಿದೆ. ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಪಥದತ್ತ ಸಾಗಿರುವ ಸಿಂಧನೂರು ಜಿಲ್ಲಾ ಕೇಂದ್ರ ಮಾಡಿದರೆ, ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯುತ್ತದೆ’ ಎಂದು ತಿಳಿಸಿದರು.

ನಗರ ಘಟಕದ ಅಧ್ಯಕ್ಷ ದಾವಲಸಾಬ್ ದೊಡ್ಮನಿ, ಮುಖಂಡರಾದ ಪಿ.ರಾಘವೇಂದ್ರ, ಖಾಜಾ ಬನ್ನಿಗನೂರು, ಪರಶುರಾಮ, ರಾಘವೇಂದ್ರ, ಶ್ರೀಕಾಂತರೆಡ್ಡಿ, ಮಹಿಬೂಬ್ಸಾಬ್ ಮುಳ್ಳೂರು, ಮಲ್ಲಿಕಾರ್ಜುನ, ಗನಿಪಾಷಾ, ಜಾಫಾರ್ ಮಹಿಬೂಬ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-32-1171408450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.