ಸಿಂಧನೂರು: ಪ್ರಸ್ತುತ ಬೇಸಿಗೆ ಕಾಲದಲ್ಲಿ ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ 08535-230148 ಸಹಾಯವಾಣಿಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಸೂಚಿಸಿದರು.

ಸ್ಥಳೀಯ ತಾ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈಗಾಗಲೇ ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಹರಿಸಿ ಗ್ರಾಮೀಣ ಪ್ರದೇಶಗಳಲ್ಲಿರುವ ಕೆರೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಜುಲೈ ಅಂತ್ಯದವರೆಗೆ ನೀರಿನ ಸಂಗ್ರಹದ ಆದ್ಯತೆ ಮೇರೆಗೆ ಕುಡಿಯುವ ನೀರಿನ ನಿರ್ವಹಣೆ ಮಾಡಿ ಸರಬರಾಜು ಮಾಡಬೇಕು. ವಾರಕ್ಕೊಮ್ಮೆ ನೀರಿನ ಪರೀಕ್ಷೆ ಮಾಡಿಸಬೇಕು. ನೀರಿನ ಹಾಹಾಕಾರ ಸೃಷ್ಟಿಯಾದರೆ ಪಿಡಿಒಗಳನ್ನೇ ನೇರ ಹೊಣೆಯಾಗಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಪ್ರತಿ 2 ಮತ್ತು 4ನೇ ಸೋಮವಾರ ನಡೆಯುವ ಕುಡಿಯುವ ನೀರಿನ ಟಾಸ್ಕ್ಫೋರ್ಸ್ ಸಭೆಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು’ ಎಂದು ಹೇಳಿದರು.

ನೀರಿನ ಕೊರತೆ ಇರುವಲ್ಲಿ ತಾಲ್ಲೂಕಿಗೆ 5 ಬೋರ್ವೆಲ್ ಕೊರೆಸಲು ಅವಕಾಶವಿದೆ ಎಂದು ಹಾಲಸಿದ್ದಪ್ಪ ಪೂಜಾರಿ ಸಭೆಯಲ್ಲಿ ತಿಳಿಸಿದಾಗ ಮಲ್ಲದಗುಡ್ಡ, ನಾಲ್ಕನೇ ಮೈಲ್ ಕ್ಯಾಂಪ್, ಎಲೆಕೂಡ್ಲಿಗಿ ಕ್ಯಾಂಪ್, ಗೋಮರ್ಸಿ, ಬಾದರ್ಲಿ ಬೂತಲದಿನ್ನಿ, ಅರಗಿನಮರ ಕ್ಯಾಂಪ್ಗಳಿಗೆ ಹೊಸದಾಗಿ ಬೋರ್ವೆಲ್ ಹಾಕಿಸಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಮನವಿ ಮಾಡಿದರು.

ತಾ.ಪಂ. ಮಳಿಗೆಗಳಲ್ಲಿ ಟೆಂಡರ್ ಆಗಿರುವ 5 ಮಳಿಗೆಗಳನ್ನು ಟೆಂಡರ್ ದಾರರು ಮುಂದುವರಿಸದೆ ಬಿಟ್ಟಿದ್ದು, ಅವರ ಇಎಂಡಿ ಮೊತ್ತ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಹೊಸದಾಗಿ 5 ಮಳಿಗೆಗಳ ಟೆಂಡರ್ ಕರೆಯಲು ಸೂಚನೆ ನೀಡಲಾಗಿದೆ ಎಂದು ತಾ.ಪಂ. ಇಒ ಚಂದ್ರಶೇಖರ ತಿಳಿಸಿದರು.

ನಂತರ ಬಿಇಒ ಬಸವಲಿಂಗಪ್ಪ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸಿಂಧನೂರು ತಾಲ್ಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಕಲಬುರಗಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ ಎಂದು ತಿಳಿಸಿದರು. ಈ ವೇಳೆ ಅಧಿಕಾರಿಗಳು ಫಲಿತಾಂಶಕ್ಕಾಗಿ ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದರು.

ತಾ.ಪಂ. ಯೋಜನಾಧಿಕಾರಿ ಅಮರಗುಂಡಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜನಿಯರ್ ಡಿ. ವಿಜಯಲಕ್ಷ್ಮಿ, ಪಂಚಾಯತ್ ರಾಜ್ ಎಂಜನಿಯರಿಂಗ್ ಉಪವಿಭಾಗದ ಎಇಇ ಪ್ರಕಾಶ ಪಾಂಡುರಂಗ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗಪ್ಪ ಅಂಗಡಿ ಸೇರಿ ಅಧಿಕಾರಿಗಳು ಹಾಗೂ ಪಿಡಿಒಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-32-1261780721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.