ಸಿಂಧನೂರು: ‘ಸದ್ಭಾವನಾ ವೇದಿಕೆ, ಜಮಾಅತೆ ಇಸ್ಲಾಮಿ ಹಿಂದ್ ಹಾಗೂ ಭಾವೈಕ್ಯ ಶಾಂತಿ ಸಂದೇಶ ಸಂಸ್ಥೆ ತಾಲ್ಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ‘ಹಬ್ಬಗಳ ಸೌಹಾರ್ದ ಸಂಗಮ’ ಕಾರ್ಯಕ್ರಮ ಏ.3 ರಂದು ಸಂಜೆ 7.15 ಗಂಟೆಗೆ ನಗರದ ಕೋಟೆ ಏರಿಯಾದ ಮಿಲಾಪ್ ಶಾದಿಮಹಲ್ನಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಟಿ.ಹುಸೇನ್ಸಾಬ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಏ.3 ರಂದು ಸಂಜೆ ನಡೆಯುವ ಹಬ್ಬಗಳ ಸೌಹಾರ್ದ ಸಂಗಮ ಕಾರ್ಯಕ್ರಮದಲ್ಲಿ ತಿಮ್ಮಾಪುರ ಕಲ್ಯಾಣಾಶ್ರಮದ ಮಹಾಂತಸ್ವಾಮಿ ಸಾಲಿಮಠ ಮುದಗಲ್, ಚಿಂತಕ ಮುಹಮ್ಮದ್ ಕುಂಞ ಮಂಗಳೂರು, ನಿವೃತ್ತ ಉಪನ್ಯಾಸಕಿ ಮಧುಮತಿ ದೇಶಪಾಂಡೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸದ್ಭಾವನಾ ವೇದಿಕೆ ಅಧ್ಯಕ್ಷ ಚನ್ನನಗೌಡ ಪೊಲೀಸ್ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ವಿವರಿಸಿದರು.

ಭಾವೈಕ್ಯ ಶಾಂತಿ ಸಂದೇಶ ಸಂಸ್ಥೆಯ ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ ಮಾತನಾಡಿ, ‘ಭಾಗವಹಿಸುವ ಒಂದು ಸಾವಿರ ಜನರಿಗೆ ಬೇವು-ಬೆಲ್ಲ, ಸುರುಕುರುಮಾ, ಊಟದ ವ್ಯವಸ್ಥೆ ಮಾಡಲಾಗುವುದು’ ಎಂದರು.

ಮುಖಂಡರಾದ ಬಾಬರ್ಪಾಷಾ ಜಾಗೀರದಾರ್, ಬಾಬರ್ ಬೇಗ್, ಡಿ.ಎಚ್.ಕಂಬಳಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-32-1036717145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.