ಸಿಂಧನೂರು: ‘ಎಚ್.ಮರಿಯಪ್ಪ ಹೆಡಗಿಬಾಳ ಅವರು ವಕೀಲ ವೃತ್ತಿಯ ಜೊತೆಗೆ ಸಮಾಜ ಸೇವಾ ಕಾರ್ಯ ನಡೆಸುತ್ತಿರುವುದು ಅತ್ಯಂತ ಶ್ಲಾಘನೀಯ’ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಎಚ್.ಮರಿಯಪ್ಪ ಹೆಡಗಿಬಾಳ ವಕೀಲರು ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೇಸಿಗೆ ಶಿಬಿರದ ಸಮಾರೋಪ, ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಹುಟ್ಟು ಆಕಸ್ಮಿಕ, ಸಾವು ಖಚಿತ. ಇವುಗಳ ಮಧ್ಯೆ ಸಾರ್ಥಕ ಜೀವನ ನಡೆಸಬೇಕು. ಎಚ್.ಮರಿಯಪ್ಪ ಅವರು ಪ್ರತಿವರ್ಷ ಬೇಸಿಗೆಯಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಅರವಟಿಗೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಶಿಬಿರ, ಕಾನೂನು ಅರಿವು ಕಾರ್ಯಕ್ರಮ, ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಜೊತೆಗೆ ಅನೇಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಸಾಮಾಜಿಕ ಕಳಕಳಿ ಮೆರೆಯುತ್ತಿದ್ದಾರೆ. ಇದು ಇತರರಿಗೆ ಸ್ಫೂರ್ತಿದಾಯಕವಾಗಿದೆ’ ಎಂದು ಅವರು ಹೇಳಿದರು.

ಗಂಗಾವತಿಯ ಸ್ಫೂರ್ತಿ ಆಯು ರ್ವೇದಿಕ್ ಮೆಡಿಕಲ್ ಕಾಲೇಜು ಹಾಗೂ ಡಾ.ಎಸ್.ವಿ.ಸವಡಿ ಆಯುರ್ವೇದಿಕ್ ಆಸ್ಪತ್ರೆ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರದಲ್ಲಿ ಸುಮಾರು 80ಕ್ಕೂ ಹೆಚ್ಚು ಶಿಬಿರಾರ್ಥಿಗಳು ಹಾಗೂ ನಗರದ ವಿವಿಧ ವಾರ್ಡ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನರು ತಪಾಸಣೆ ಮಾಡಿಸಿಕೊಂಡರು. ಇದೇ ಸಂದರ್ಭದಲ್ಲಿ ಟ್ರಸ್ಟ್ನ ಸಂಸ್ಥಾಪಕ ಎಚ್.ಮರಿಯಪ್ಪ ಹೆಡಗಿಬಾಳ ವಕೀಲ ಅವರನ್ನು ಸನ್ಮಾನಿಸಲಾಯಿತು.

ವೆಂಕಟಗಿರಿ ಕ್ಯಾಂಪ್ನ ಸಿದ್ದಾಶ್ರಮದ ಸದಾನಂದ ಶರಣರು ಹಾಗೂ ಹೋಲಿ ಫ್ಯಾಮಿಲಿ ಚರ್ಚ್ ಸ್ಕೂಲ್ ವ್ಯವಸ್ಥಾಪಕ ಫಾದರ್ ಜ್ಞಾನ ಪ್ರಕಾಶಂ ಸಾನ್ನಿಧ್ಯ ವಹಿಸಿದ್ದರು. ವಕೀಲರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಎ.ವಿ.ಕಣವಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ರಾಮನಗೌಡ, ಮಸ್ಕಿ ವಕೀಲರ ಸಂಘದ ಅಧ್ಯಕ್ಷ ಎಚ್.ವೀರಭದ್ರಪ್ಪ, ಜಿಲಾನ್ ಖಾಜಿ ವಕೀಲ, ವೀರಭದ್ರಗೌಡ ವಕೀಲ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-32-1198911551

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.