ಸಿಂಧನೂರು: ಸ್ಥಳೀಯ ಜನತಾ ಗಂಜ್ ಮತ್ತು ಗ್ರಾಮೀಣ ಹಮಾಲರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮೇ26 ರಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಮತ್ತು ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲು ಹಮಾಲರ ಸಂಘದ ತಾಲ್ಲೂಕು ಘಟಕ ತೀರ್ಮಾನಿಸಿತು.

ಸ್ಥಳೀಯ ಶ್ರಮಿಕ ಭವನದಲ್ಲಿ ಶನಿವಾರ ಹಮಾಲರ ಸಂಘದಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಾಷುಮಿಯಾ ಅವರು ‘ಮ26 ರಂದು ಬೆಳಿಗ್ಗೆ 10.30ಕ್ಕೆ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮೆರವಣಿಗೆ ಮೂಲಕ ಎಪಿಎಂಸಿ ಕಾರ್ಯದರ್ಶಿ ಹಾಗೂ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಹಮಾಲರು ಭಾಗವಹಿಸಬೇಕು’ ಎಂದು ಕೋರಿದರು.

ನಗರದ ಹೊರವಲಯದಲ್ಲಿರುವ ಮೂರುಮೈಲ್ ಕ್ಯಾಂಪ್ನಲ್ಲಿ ಕಳೆದ 10 ವರ್ಷಗಳ ಹಿಂದೆ ಹಮಾಲರಿಗೆ ನಿವೇಶನ ವಿತರಿಸಲಾಗಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿಗಳು ಆ ನಿವೇಶನಗಳಿಗೆ ಹದ್ದುಬಸ್ತು ಮಾಡುವಂತೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಅಕ್ಕಪಕ್ಕದಲ್ಲಿ ಇರುವವರು ಆ ಜಾಗವನ್ನು ಅತಿಕ್ರಮಿಸುತ್ತಿದ್ದಾರೆ. ಆದ್ದರಿಂದ ತಕ್ಷಣ ಹಮಾಲರ ನಿವೇಶನಗಳ ಸುತ್ತ ತಂತಿ ಬೇಲಿ ಹಾಕಬೇಕು ಮತ್ತು ಮನೆಗಳನ್ನು ಕಟ್ಟಿಸಿ ಕೊಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಬಾಷುಮಿಯಾ ತಿಳಿಸಿದರು.

ಸಂಘದ ಗೌರವಾಧ್ಯಕ್ಷ ವೆಂಕನಗೌಡ ಗದ್ರಟಗಿ ಮಾತನಾಡಿ, ಹಮಾಲಿ ಕಾರ್ಮಿಕರು ಒಗ್ಗಟ್ಟಾಗಿ ಹೋರಾಡುವ ಮೂಲಕ ಸಂವಿಧಾನಬದ್ಧ ಹಕ್ಕು ಮತ್ತು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು. ಕಾರ್ಮಿಕ ಮುಖಂಡ ತಿರುಪತಿ ಮಾತನಾಡಿದರು. ಮುಖಂಡರಾದ ಹನುಮಂತಪ್ಪ ಹಂಚಿನಾಳ, ಗಂಗಪ್ಪ ಹೊಸಳ್ಳಿ, ಸುಭಾನ್ಸಾಬ್, ಜಿಲಾನಿಸಾಬ್, ಬೊಮ್ಮಣ್ಣ ಸಾಲಗುಂದಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-1271028598

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.