ಸಿಂಧನೂರು: ತಾಲ್ಲೂಕಿನ ಹತ್ತಿಗುಡ್ಡ ಗ್ರಾಮದಲ್ಲಿ ಬಿಲ್ವಪತ್ರೆ ಬಸವೇಶ್ವರ ಜಾತ್ರಾ ಮಹೋತ್ಸವವು ಸೋಮವಾರ ಸಂಜೆ ವಿಜೃಂಭಣೆಯಿಂದ ಜರುಗಿತು.

ಬೆಳಗಿನಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರಗಳು ನೆರವೇರಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಮಹಿಳೆಯರು ಹಾಗೂ ಯುವಕರು ಭಕ್ತಿ ಗೀತೆಗಳೊಂದಿಗೆ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸಿದರು.

ಜಾತ್ರಾ ಅಂಗವಾಗಿ ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಭಾಗವಹಿಸಿದ್ದರು. ಜಾತ್ರಾ ಮಹೋತ್ಸವದಲ್ಲಿ ತುರ್ವಿಹಾಳ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.