ಸಿಂಧನೂರು: ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿನ ಹಲವು ದೋಷಗಳನ್ನು ಸರಿಪಡಿಸುವುದು ಸೇರಿದಂತೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸುಧಾರಿಸಲು ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ಮನವಿ ನೀಡಿದ ಹಿನ್ನೆಲೆಯಲ್ಲಿ, ಡಿಎಚ್ಒ ಡಾ.ಸುರೇಂದ್ರ ಬಾಬು ಅವರು ವೈದ್ಯರು, ಸಿಬ್ಬಂದಿ ಹಾಗೂ ಸಂಘಟನೆಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ತಾಲ್ಲೂಕಿನ ಕೆಲ ಆರೋಗ್ಯ ಕೇಂದ್ರಗಳಲ್ಲಿ ಕಾಯಂ ವೈದ್ಯರಿಲ್ಲ, ವೈದ್ಯರು ಸೇವಾ ಅವಧಿಯಲ್ಲಿ ಲಭ್ಯವಿರುವುದಿಲ್ಲ, ಚಿಕಿತ್ಸೆ ಕೊಡಬೇಕಾದ ವೈದ್ಯರು ಕಡತಗಳಿಗೆ ಸಹಿ ಮಾಡುವುದು, ಕಾರ್ಯಕ್ರಮ ನಿರ್ವಹಿಸುವುದಕ್ಕೆ ಮಾತ್ರ ಸೀಮಿತವಾಗಿದ್ದಾರೆ ಎಂದು ಸಿಪಿಐ(ಎಂಎಲ್) ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಯ ಗಮನ ಸೆಳೆದರು.

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವಾ ಅವಧಿಯಲ್ಲಿ ವೈದ್ಯರು ಇರುವುದಿಲ್ಲ, 25 ಹುದ್ದೆಗಳು ಖಾಲಿ ಇವೆ, ಅಗತ್ಯ ಸಲಕರಣೆ, ಯಂತ್ರೋಪಕರಣಗಳ ಕೊರತೆ ಇದೆ ಎನ್ನುವುದೂ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಂಘಟನೆಯ ಕಾರ್ಯಕರ್ತರು ಡಿಎಚ್ಒ ಅವರಿಗೆ ತಿಳಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗುವ ಗರ್ಭಿಣಿಯರ ಸಂಖ್ಯೆ ಹೆಚ್ಚಿರುವುದರಿಂದ ಸಮಸ್ಯೆಯಾಗಿದೆ. ಆದಷ್ಟು ಶೀಘ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಚ್ಒ ಡಾ.ಸುರೇಂದ್ರ ಬಾಬು ತಿಳಿಸಿದರು.

ಈ ವೇಳೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕಾವೇರಿ ಶಾವಿ, ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಸುರೇಶಗೌಡ, ಡಾ.ಶಕುಂತಲಾ ಪಾಟೀಲ, ಡಾ.ಮಂಜುನಾಥ, ಡಾ.ಸಲಾವುದ್ದೀನ್ ಹಾಗೂ ಸಿಪಿಐ(ಎಂಎಲ್) ಲಿಬರೇಶನ್ ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಮುಖಂಡರಾದ ಆರ್.ಎಚ್.ಕಲ್ಮಂಗಿ, ಕಂಠೆಪ್ಪ ರೈತನಗರಕ್ಯಾಂಪ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-32-1129292578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.