ಸಿಂಧನೂರು: ‘ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹನುಮಂತಪ್ಪ ಮುದ್ದಾಪುರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಎಚ್.ಕೆ.ದಿದ್ದಿಗಿ ಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಹಾಗೂ ಬ್ಲಾಕ್ ಕಾಂಗ್ರೆಸ್ ಮಸ್ಕಿ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಸಿಂಧನೂರು ಮತ್ತು ಮಸ್ಕಿ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಹನುಮಂತಪ್ಪ ಮುದ್ದಾಪುರ ಅವರು ಮಾದಿಗ ಸಮುದಾಯದ ಅಗ್ರಗಣ್ಯ ನಾಯಕ. ಕಳಂಕ ಇಲ್ಲದೆ ನಿಷ್ಠಾವಂತ ಕಾರ್ಯಕರ್ತರಾಗಿ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.

ಸೋಮನಾಥ ಮಾಟೂರು, ಪ್ರವೀಣ ಧುಮತಿ, ಸುರೇಶ ಎಲೆಕೂಡ್ಲಿಗಿ, ಕನಕಪ್ಪ ಕುಣೆಕೆಲ್ಲೂರು, ಅರವಿಂದ ರೆಡ್ಡಿ ತುರ್ವಿಹಾಳ, ಹನುಮಂತ ಮುರಾರಿ, ಮಂಜುನಾಥ ಎಲೆಕೂಡ್ಲಿಗಿ, ಜಂಬಣ್ಣ ಉಪ್ಪಲದೊಡ್ಡಿ, ಹನುಮೇಶ ಉಪ್ಪಲದೊಡ್ಡಿ, ರಮೇಶ, ನಾಗರಾಜ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-839340662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.