ಸಿಂಧನೂರು: ನೆಲೋಗಿ ಗ್ರಾಮದಲ್ಲಿ ಕರ್ತವ್ಯನಿರತ ಮಹಿಳಾ ಪಿಡಿಒ ಅವರಿಗೆ ಬೆದರಿಕೆ ಹಾಕಿದ ಆರೋಪಿಯನ್ನು ಕೂಡಲೇ ಬಂಧಿಸಬೇಕು, ಮೀನಾಕ್ಷಿ ಸುಂದರಂ ಸಮಿತಿಯ ವರದಿ ಜಾರಿಗೊಳಿಸಬೇಕು ಹಾಗೂ ಬಡ್ತಿ ತಾರತಮ್ಯ ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ತಾಲ್ಲೂಕು ಘಟಕದಿಂದ ಸೋಮವಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮ ಪಂಚಾಯಿತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಇಮ್ತಾಜ್ ಮಮದಾಪೂರ ಅವರಿಗೆ ಸ್ಥಳೀಯ ನಿವಾಸಿ ನಿಂಗಣ್ಣ ಅತ್ಯಂತ ಅಸಭ್ಯವಾಗಿ ನಿಂದಿಸಿ, ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾನೆ. ಈ ಘಟನೆಯು ಇಡೀ ಇಲಾಖೆಯ ಅಧಿಕಾರಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಆರೋಪಿಯನ್ನು ಕೂಡಲೇ ಬಂಧಿಸಿ ರೌಡಿಶೀಟರ್ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಸೂಡಿ ಆಗ್ರಹಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ನೌಕರರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳು ಮತ್ತು ಅಸಹಜ ಸಾವುಗಳ ಕುರಿತು ಅಧ್ಯಯನ ಮಾಡಲು ಕಳೆದ ಒಂದು ವರ್ಷದ ಹಿಂದೆ ಮೀನಾಕ್ಷಿ ಸುಂದರಂ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಈ ಸಮಿತಿಯು ಇದುವರೆಗೂ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ಆದ್ದರಿಂದ ಕೂಡಲೇ ವರದಿಯನ್ನು ಪಡೆದು ನೌಕರರ ಸುರಕ್ಷತೆಗೆ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಅಧೀಕ್ಷಕರು ಮತ್ತು ಪಿಡಿಒ ಹುದ್ದೆಗಳು ಸಮಾನ ವೇತನ ಶ್ರೇಣಿಯಲ್ಲಿದ್ದರೂ ಬಡ್ತಿ ಪ್ರಕ್ರಿಯೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ. ಪಿಡಿಒ ಹುದ್ದೆಗೆ ಬಡ್ತಿ ನೀಡುವಾಗ ಎಡಿ ಹುದ್ದೆಗಿಂತ ಕಡಿಮೆ ವೇತನ ಶ್ರೇಣಿಯ ಹಿರಿಯ ಪಿಡಿಒ ಹುದ್ದೆಗೆ ನಿಗದಿ ಪಡಿಸಲಾಗುತ್ತಿದೆ. ಆದರೆ ಜಿ.ಪಂ ಅಧೀಕ್ಷಕರಿಗೆ ಹೆಚ್ಚಿನ ವೇತನದ ಸಹಾಯಕ ನಿರ್ದೇಶಕ ಹುದ್ದೆಗೆ ಹೆಚ್ಚಿನ ವೇತನ ಶ್ರೇಣಿಯೊಂದಿಗೆ ಬಡ್ತಿ ನೀಡಲಾಗುತ್ತಿದೆ. ಈ ತಾರತಮ್ಯವನ್ನು ಕೂಡಲೇ ಸರಿಪಡಿಸಬೇಕು. ಎಲ್ಲ ಪಿಡಿಒ ಹುದ್ದೆಗಳನ್ನು ಗ್ರೂಪ್-ಬಿ ದರ್ಜೆಗೇರಿಸುವ ಮೂಲಕ ಕರ್ನಾಟಕದ ಸ್ಥಳೀಯ ಸರ್ಕಾರಗಳಿಗೆ ಗೆಜೆಟೆಡ್ ಅಧಿಕಾರಿಗಳನ್ನು ನೀಡಿದ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜ್ಯವನ್ನು ಪಾತ್ರವಾಗಿಸಬೇಕು ಎಂದು ಮನವಿ ಮಾಡಿದರು.

ಎಡಿ ಯಂಕಪ್ಪ, ಪಿಡಿಒಗಳಾದ ಮುದುಕಪ್ಪ, ಮಹ್ಮದ್ ಹನೀಫ್, ವೀರಭದ್ರಪ್ಪ, ಮಹಾಂತೇಶ, ಪೂರ್ಣಿಮಾ, ಪ್ರಕಾಶ ಪಾಟೀಲ್, ಚನ್ನಬಸವ, ಸರಸ್ವತಿ, ಸವಿತಾ, ವಿದ್ಯಾ, ಜಯಶ್ರೀ, ಮಹ್ಮದ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.