ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಧನೂರು: ಸಸಿ ವಿತರಿಸಿ ಸ್ವಾಗತ ಕೋರಿದ ಹಳೆಯ ವಿದ್ಯಾರ್ಥಿಗಳು

Published 31 ಮೇ 2024, 13:51 IST
Last Updated 31 ಮೇ 2024, 13:51 IST
ಅಕ್ಷರ ಗಾತ್ರ

ಸಿಂಧನೂರು: ತಾಲ್ಲೂಕಿನ ಅರಳಹಳ್ಳಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ‘ಭೂಮಿ’ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ ಸ್ವಾಗತಿಸಲಾಯಿತು.

ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಸವರಾಜ ಹೊಗರನಾಳ, ಭೂಮಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ಕುಂಬಾರ, ಪ್ರೌಢ ಶಾಲಾ ಮುಖ್ಯಶಿಕ್ಷಕ ಬಸವರಾಜ ಬಿಳೆಕಲ್, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲಿಂಗರಾಜ, ಮುಖಂಡ ಶಿವಪುತ್ರಪ್ಪ ವಕೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ, ಪ್ರೌಢಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಸೂಗಪ್ಪ ಬಳಿಗಾರ, ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಕಾರಟಗಿ, ಸದಸ್ಯ ತಿಪ್ಪಣ್ಣ ಅನ್ವರಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹನುಮರೆಡ್ಡಿ ಪಗಡದಿನ್ನಿ, ಶಿವರಾಜ ಹರಿಗಿ, ಹನುಮಂತ ಬಡಿಗೇರ, ಮಂಜುನಾಥ ಸ್ವಾಮಿ ಹಿರೇಮಠ ಪಾಲ್ಗೊಂಡಿದ್ದರು.

ಸಿಪಿಎಸ್ ಶಾಲೆ: ನಗರದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ (ಸಿಪಿಎಸ್)ಯಲ್ಲಿ ಶುಕ್ರವಾರ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು. ಬಳಿಕ ಬಿಸಿ ಸಿಹಿಯೂಟ ನೀಡಿ ಮಕ್ಕಳೊಂದಿಗೆ ಶಿಕ್ಷಕರು ಸವಿದು ಸಂಭ್ರಮಿಸಿದರು. ಮುಖ್ಯಶಿಕ್ಷಕ ಬಸವರಾಜ ಬಿರಾದಾರ್, ಶಿಕ್ಷಕಿಯರಾದ ಸುಮಂಗಲಾ, ಸರೋಜಾದೇವಿ, ಶಕುಂತಲಾ ಉಪಸ್ಥಿತರಿದ್ದರು.

ಮಲ್ಕಾಪುರ ಶಾಲೆಯಲ್ಲಿ ಗುಲಾಬಿ ನೀಡಿ ಸ್ವಾಗತ: ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ತಿನ್ನಿಸಿ ಸ್ವಾಗತಿಸಲಾಯಿತು. ಮುಖ್ಯ ಶಿಕ್ಷಕ ಶಿವಪ್ಪ, ಸಹ ಶಿಕ್ಷಕರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ದುಗ್ಗಮ್ಮನ ಗುಂಡದಲ್ಲಿ ನೋಟ್‍ಬುಕ್ ವಿತರಣೆ: ತಾಲ್ಲೂಕಿನ ದುಗ್ಗಮ್ಮನ ಗುಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಗುಲಾಬಿ, ನೋಟ್‍ಬುಕ್, ಪೆನ್ನು ಹಾಗೂ ನೀರಿನ ಬಾಟಲ್ ಇರುವ ಕಿಟ್ ವಿತರಿಸಿ ವಿದ್ಯಾರ್ಥಿಗಳನ್ನು ಬರ ಮಾಡಿಕೊಳ್ಳಲಾಯಿತು.

ಕನಕನಗರ ಸಮೂಹ ಸಂಪನ್ಮೂಲ ವ್ಯಕ್ತಿ ಹನುಮಂತಪ್ಪ, ಮುಖ್ಯಶಿಕ್ಷಕ ಶಂಕರದೇವರು ಹಿರೇಮಠ, ಮುಖ್ಯ ಅಡಿಗೆದಾರರಾದ ರೇಣುಕಾ, ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗುಡದಪ್ಪ, ಮಾಜಿ ಅಧ್ಯಕ್ಷ ಲಕ್ಷ್ಮಣ, ಉಪಾಧ್ಯಕ್ಷೆ ರೇಣಮ್ಮ, ಅಂಗನವಾಡಿ ಶಿಕ್ಷಕಿ ಭಾಗ್ಯಮ್ಮ, ಭಾಗ್ಯಶ್ರೀ, ಸುಂಪ್ರೀತ್, ಪ್ರದೀಪ್ ಕುಮಾರ ಉಪಸ್ಥಿತರಿದ್ದರು.

ಸಿಂಧನೂರಿನ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ (ಸಿಪಿಎಸ್) ಯಲ್ಲಿ ಶುಕ್ರವಾರ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು
ಸಿಂಧನೂರಿನ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ (ಸಿಪಿಎಸ್) ಯಲ್ಲಿ ಶುಕ್ರವಾರ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು
ಸಿಂಧನೂರು ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ತಿನ್ನಿಸಿ ಸ್ವಾಗತಿಸಲಾಯಿತು
ಸಿಂಧನೂರು ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ತಿನ್ನಿಸಿ ಸ್ವಾಗತಿಸಲಾಯಿತು
ಸಿಂಧನೂರು ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ತಿನ್ನಿಸಿ ಸ್ವಾಗತಿಸಲಾಯಿತು
ಸಿಂಧನೂರು ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ತಿನ್ನಿಸಿ ಸ್ವಾಗತಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT