ಸಿಂಧನೂರು (ರಾಯಚೂರು ಜಿಲ್ಲೆ): ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಐವರ ವಿರುದ್ಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಮುಖ ಆರೋಪಿ ಮೌನೇಶ (23), ಆರೋಪಿಗೆ ಸಹಕರಿಸಿದ ಮೌನೇಶ(40), ಬೀರಪ್ಪ(42), ಮಲ್ಲಿ ಅಲಿಯಾಸ್ ಮಲ್ಲೇಶ್(45) ಹಾಗೂ ವೀರೇಶ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ನಡೆಸಿದ್ದಾರೆ.

10ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯನ್ನು ಮೌನೇಶ ಪ್ರೀತಿಸುತ್ತಿದ್ದ ಎನ್ನಲಾಗಿದೆ. 2025ರ ಜುಲೈ 6ರಂದು ಬಾಲಕಿ ಪಾಲಕರೊಂದಿಗೆ ಮನೆಯ ಅಂಗಳದಲ್ಲಿ ಮಲಗಿದ್ದಾಗ ಮೌನೇಶ ಬೈಕ್ ಮೇಲೆ ಬಂದು ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದ.

ಬಾಲಕಿಯನ್ನು ಕರೆದುಕೊಂಡು ಹೋಗಿ ಸಂಬಂಧಿಕರ ಮನೆಯಲ್ಲಿ ಇಟ್ಟು ಐದು ತಿಂಗಳಿಂದ ಕೂಡಿ ಹಾಕಿದ್ದ. ಆರೋಪಿಯು ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿ, ಚಿತ್ರಹಿಂಸೆ ನೀಡಿದ್ದ ಎನ್ನಲಾಗಿದೆ. ಪೋಷಕರಿಗೆ ಗೊತ್ತಾದ ನಂತರ ಬಾಲಕಿಯನ್ನು ಕೊಠಡಿಯಲ್ಲಿ ಬಿಟ್ಟು ಪರಾರಿಯಾಗಿದ್ದ. ಸದ್ಯ ಬಾಲಕಿಯನ್ನು ರಕ್ಷಿಸಲಾಗಿದ್ದು, ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.