ಸಿಂಧನೂರು: ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ನಿವಾಸಿಗಳ ಒಕ್ಕಲೆಬ್ಬಿಸುವಿಕೆ ಪ್ರಯತ್ನವನ್ನು ಖಂಡಿಸಿ ಹಾಗೂ ಅವರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ಸ್ಟಾರ್ ತಾಲ್ಲೂಕು ಘಟಕ ಗುರುವಾರ ನಿವಾಸಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿತು.

ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ್ ಮಾತನಾಡಿ, ‘ಆಡಳಿತ ಮಂಡಳಿ ಮತ್ತು ಜನಪ್ರತಿನಿಧಿಗಳ ದ್ವಂದ್ವ ನೀತಿ ಖಂಡನೀಯ. ನಗರ ಹಾಗೂ ತಾಲ್ಲೂಕಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಪ್ರಭಾವಿಗಳು ಅಕ್ರಮವಾಗಿ ಕಬ್ಜಾ ಮಾಡಿದ್ದಾರೆ. ಅಂತಹ ನೆಲಗಳ್ಳರನ್ನು ತೆರವುಗೊಳಿಸಲು ಮುಂದಾಗದ ತಾಲ್ಲೂಕಾಡಳಿತ ಕೇವಲ ಬಡ ಕೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡಿರುವುದು ದೌರ್ಭಾಗ್ಯದ ಸಂಗತಿ’ ಎಂದು ದೂರಿದರು.

ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ತಕ್ಷಣ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು. ಬಡವರ ಪರವಾಗಿ ನಿಂತು ಅವರಿಗೆ ನ್ಯಾಯ ಕೊಡಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಹಾಗೆಯೇ ಸಿಂಧನೂರು ನಗರಸಭೆ, ತಾಲ್ಲೂಕಾಡಳಿತ ಮತ್ತು ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಳ್ಳಬೇಕು. 40-50 ವರ್ಷಗಳಿಂದ ವಾಸವಿರುವ ಬಡವರಿಗೆ ಒಕ್ಕಲೆಬ್ಬಿಸುವ ನೋಟಿಸ್ ನೀಡುವ ಬದಲು, ಅವರಿಗೆ ಕಾನೂನುಬದ್ಧವಾಗಿ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು. ಡಿ.ಎಸ್.ಕಲ್ಮಠ ವಕೀಲರು ಹಾಕಿದ ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ದೂರು ನೋಟಿಸ್ ವಿರುದ್ಧ ಕಾನೂನು ಸಮರ ಸಾರಲಾಗುವುದು. ಒಂದು ವೇಳೆ ಸರ್ಕಾರ ಹಕ್ಕುಪತ್ರ ನೀಡಲು ವಿಳಂಬ ಮಾಡಿದರೆ, ಜನರನ್ನು ಸಂಘಟಿಸಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಸದಸ್ಯರಾದ ಹುಲುಗಪ್ಪ ಬಳ್ಳಾರಿ, ಮುರಳಿಕೃಷ್ಣ, ಪ್ರವೀಣ್, ಲತಾ, ಮುನ್ನಿಬೇಗಂ, ಹುಸೇನ್ಬಾಷಾ, ಅಲಿಮಾ, ಹಸೇನ್, ಸರಸ್ವತಿ, ರಂಗಸ್ವಾಮಿ ಸೇರಿದಂತೆ ನೂರಾರು ನಿವಾಸಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-32-1535224587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.