ಸಿಂಧನೂರು: ತಾಲ್ಲೂಕಿನ ಹೊಸಳ್ಳಿ ಇ.ಜೆ ಕ್ಯಾಂಪ್ನಲ್ಲಿರುವ ಶ್ರೀಕೃಷ್ಣದೇವರಾಯ ವಿದ್ಯಾ ಸಂಸ್ಥೆಗೆ ಮಂಜೂರಾಗಿರುವ ಸೈನಿಕ ಶಾಲೆಯ ಉದ್ಘಾಟನೆ ಸಮಾರಂಭದ ಅಂಗವಾಗಿ ಸಿಂಧನೂರು ನಗರಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆಂಧ್ರಪ್ರದೇಶ ರಾಜ್ಯದ ಸಚಿವ ನಾರಾ ಲೋಕೇಶ್, ಕೇಂದ್ರ ಸರ್ಕಾರದ ರಕ್ಷಣಾ ಖಾತೆಯ ರಾಜ್ಯ ಸಚಿವ ಸಂಜಯ್ ಸೇಠ್ ಅವರನ್ನು ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.

ನಾರಾ ಲೋಕೇಶ್ ಅವರನ್ನು ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಮ್ಮ ಸಮಾಜದ ಮುಖಂಡರು ಜೆಸಿಬಿ ಮೂಲಕ ಬೃಹತ್ ಹೂವಿನ ಹಾರ ಹಾಕಿ ಸ್ವಾಗತಿಸಿ ಸನ್ಮಾನಿಸಿದರು.

ಬಳಿಕ ಕನಕದಾಸ ವೃತ್ತದಲ್ಲಿ ಬಿಜೆಪಿ ಮುಖಂಡ ಕೆ.ಕರಿಯಪ್ಪ ಮತ್ತು ಅವರ ಬೆಂಬಲಿಗರು ಜೆಸಿಬಿ ಮೂಲಕ ದೊಡ್ಡ ಹೂವಿನ ಹಾರವನ್ನು ಹಾಕಿ ಸ್ವಾಗತಿಸಿಕೊಂಡರು. ಇದೇ ಸಂದರ್ಭದಲ್ಲಿ ಕೆ.ಕರಿಯಪ್ಪ ನಾರಾ ಲೋಕೇಶ್ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಿದರು. ಮಹಾತ್ಮ ಗಾಂಧಿ ಸರ್ಕಲ್ನಲ್ಲಿ ಕಮ್ಮವಾರಿ ಸಮಾಜದ ಮುಖಂಡರು, ಯುವಕರು ಹೂವಿನ ಹಾರ ಹಾಕಿ ಸನ್ಮಾನಿಸಿದರು.

ಅಲ್ಲಿಂದ ‘ಯುವ ಗಳಂ’ ಎನ್ನುವ ತೆರೆದ ವಾಹನದಲ್ಲಿ ನಾರಾ ಲೋಕೇಶ್ ಏರಿ ಜನರತ್ತ ಕೈ ಬೀಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಸಂಜಯ್ ಸೇಠ್, ಸಂಸದ ಮೋಕುಕುಲ್ಲಿಕಿ ಭರತ್ ಅವರೂ ವಾಹನ ಹತ್ತಿ ಜನರಿಗೆ ನಮಸ್ಕರಿಸಿ ಕೈಬೀಸಿ ಹರ್ಷ ವ್ಯಕ್ತಪಡಿಸಿದರು.

ಕಮ್ಮ ಸಮಾಜದ ಮುಖಂಡರು, ಯುವಕರು ಗಂಗಾವತಿ ರಸ್ತೆ ಮೂಲಕ ಕಮ್ಮವಾರಿ ಕಲ್ಯಾಣ ಮಂಟಪದವರೆಗೆ ಬೈಕ್ ರ್ಯಾಲಿ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-32-252292396

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.