ಸಿಂಧನೂರು: ಸಾರಿಗೆ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿದ ನಗರದ ವಿವಿಧ ಖಾಸಗಿ ಶಾಲೆಗಳ 5 ವಾಹನಗಳನ್ನು ರಸ್ತೆ ಸಾರಿಗೆ ಅಧಿಕಾರಿಗಳು ಶನಿವಾರ ಜಪ್ತಿ ಮಾಡಿದ್ದಾರೆ.

ರಸ್ತೆ ಸಾರಿಗೆ ಅಧಿಕಾರಿ ರಾಕೇಶ್ ಮಾತನಾಡಿ,‘ಸಿಂಧನೂರು ನಗರದಲ್ಲಿ 15 ವರ್ಷ ಮೇಲ್ಪಟ್ಟ 55 ಶಾಲಾ ಬಸ್ಸುಗಳಿವೆ. ಈ ಬಸ್ಸುಗಳನ್ನು ಶಾಲಾ ಮಕ್ಕಳನ್ನು ಕರೆತರಲು ಸಂಚಾರಕ್ಕೆ ಬಳಸಿದರೆ, ಅಂತಹ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಇನ್ನು 50 ಶಾಲಾ ವಾಹನಗಳನ್ನು ಪತ್ತೆಹಚ್ಚಲಾಗುತ್ತಿದೆ’ ಎಂದರು.

‘ಮಕ್ಕಳ ಸುರಕ್ಷತೆ ಮತ್ತು ಕರ್ನಾಟಕ ಮೋಟರ್ ಸೈಕಲ್ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಈ ವಿಷಯವನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಲಾಗಿದ್ದು, ಶಾಸಕರು ಅಂತಹ ವಾಹನಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ’ ಎಂದರು.

‘ಪ್ರತಿ ಶಾಲಾ-ಕಾಲೇಜುಗಳಲ್ಲಿ ಕ್ಯಾಬ್ ಕಮಿಟಿಗಳನ್ನು ಕಡ್ಡಾಯವಾಗಿ ರಚಿಸಬೇಕು. ಆ ಮೂಲಕ ಶಾಲಾ ವಾಹನಗಳನ್ನು ಸಮರ್ಪಕ ನಿರ್ವಹಣೆ ಮಾಡಬೇಕು. ಕೆಲ ಶಾಲಾ ಆಡಳಿತ ಮಂಡಳಿಯವರು ಮಾಡಿದ್ದಾರೆ, ಕೆಲವರು ಮಾಡಿಲ್ಲ, ಕೆಲವರು ಕಮಿಟಿ ಮಾಡಿದ್ದರೂ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಶಾಲೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.