ಸಿಂಧನೂರು: ನಗರದ ಬ್ರಾಹ್ಮಣರ ಓಣಿಯ ಶ್ರೀರಾಮ ಮಂದಿರದಲ್ಲಿ ಏಪ್ರಿಲ್ 21ರಂದು ಆದಿಗುರು ಶಂಕರಾಚಾರ್ಯರ ಜಯಂತ್ಯುತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಾಹ್ಮಣ ಸಮಾಜದ ತಾಲ್ಲೂಕು ಅಧ್ಯಕ್ಷ ಕೆ. ಗೋವಿಂದರಾವ ತಿಳಿಸಿದ್ದಾರೆ.

ಶನಿವಾರ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ, ರುದ್ರಾಭಿಷೇಕ, ಉಪ್ಪಾರವಾಡಿ ಶಾಲೆಯಿಂದ ಶ್ರೀರಾಮ ಮಂದಿರದವರೆಗೆ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ನಂತರ ಶ್ರೀರಾಮ ಮಂದಿರದಲ್ಲಿ ಪಂಡಿತ ರಾಮಚಂದ್ರ ಸೋಮಯಾಜಿ ಅವರಿಂದ ‘ಆದಿಗುರು ಶಂಕರಾಚಾರ್ಯರ ಜೀವನ ಚರಿತ್ರೆ’ ಕುರಿತು ಉಪನ್ಯಾಸ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬ್ರಹ್ಮಾನಂದ ಭಟ್, ಸುಬ್ಬಶಾಸ್ತ್ರಿ, ಸಾಮಾಜಿಕ ಸೇವೆಯಲ್ಲಿ ನಿರತರಾಗಿರುವ ಭೀಮಸೇನ ಜಾಗೀರದಾರ ಹಾಗೂ ಆನಂದ ಗೌರ್ಕರ್ ಅವರನ್ನು ‘ಶ್ರೀ ಶಂಕರ ಅನುಗ್ರಹ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-32-2034691016

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.