ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ, ಕುರಿ ಸಂತೆ ನಡೆಯುವ ಸಂದರ್ಭದಲ್ಲಿ ಕುರಿ ಮಾರಾಟ ಮಾಡಿ ಬಂದ ಹಣ ಇಟ್ಟುಕೊಂಡಿದ್ದ ವ್ಯಕ್ತಿಯಿಂದ ಕಳ್ಳರು ₹3 ಲಕ್ಷ ಕಳವು ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಪ್ಪಳ ತಾಲ್ಲೂಕಿನ ಬೆನಕನದೊಡ್ಡಿ ಗ್ರಾಮದ ಮುತ್ತುರಾಜ ಗವಿಯಪ್ಪ ಎಂಬುವವರು ಕುರಿ ಮಾರಾಟ ಮಾಡಿ, ಅದರಿಂದ ಬಂದ ₹3 ಲಕ್ಷ ಎಣಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಕಳ್ಳರು ಬೈಕ್ನಲ್ಲಿ ಬಂದು ಹಣ ಲಪಟಾಯಿಸಿಕೊಂಡು ಪರಾರಿಯಾಗಿದ್ದಾರೆ. ಹಣ ಕಳೆದುಕೊಂಡ ಮುತ್ತುರಾಜ ಗಾಬರಿಯಿಂದ ಅವರ ಹಿಂದೆ ಚೀರಾಡುತ್ತಾ ಹಿಂಬಾಲಿಸಿದರು. ಆದರೂ ಪ್ರಯೋಜನವಾಗಲಿಲ್ಲ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-1790364742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.