ಸಿಂಧನೂರು: ಜಿಲ್ಲಾಡಳಿತ ಹಾಗೂ ಶಾಸಕರು ಶೀಘ್ರ ಸಭೆ ಕರೆದು ಕಳೆದ 16 ತಿಂಗಳುಗಳಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಬೀದಿಬದಿ ವ್ಯಾಪಾರಿಗಳ ಹೋರಾಟ ಸಮಿತಿಯ ಸಂಚಾಲಕ ಡಿ.ಎಚ್.ಪೂಜಾರ್ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಾಡಳಿತ ಹಾಗೂ ಜಿಲ್ಲಾಡಳಿತ ಬಡ ವ್ಯಾಪಾರಿಗಳ ನೋವಿನ ಕೂಗನ್ನು ಕೇಳಿಸಿಕೊಳ್ಳುತ್ತಿಲ್ಲ. ಅನಿವಾರ್ಯವಾಗಿ ಏ.13ರಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. 15 ದಿನ ಕಳೆದರೂ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಶಾಸಕ ಹಂಪನಗೌಡ ಬಾದರ್ಲಿ ಅವರು ಸರ್ಕಾರಿ ಹಣ್ಣಿನ ತೋಟದ ಕಾಂಪೌಂಡ್ಗೆ ಹೊಂದಿಕೊಂಡು 10 ಅಡಿ ಒಳಗಡೆ ಡಬ್ಬಾ ಅಂಗಡಿಗಳನ್ನು ಇಟ್ಟುಕೊಳ್ಳಲು ಹೇಳಿದ್ದರು. ಅವರ ಮೌಖಿಕ ಆದೇಶದ ಪ್ರಕಾರ ಏ.23ರಂದು ಎಂಟತ್ತು ಡಬ್ಬಾ ಅಂಗಡಿಗಳನ್ನು ಇಡಲಾಗಿತ್ತು. ಆದರೆ ಏ.24 ರಂದು ತಹಶೀಲ್ದಾರ್ ಹಾಗೂ ನಗರಸಭೆ ಪೌರಾಯುಕ್ತರು ತಮ್ಮ ಸಿಬ್ಬಂದಿಯೊಂದಿಗೆ ಜೆಸಿಬಿ ಯಂತ್ರದ ಮೂಲಕ ಅಂಗಡಿಗಳನ್ನು ಒಡೆದು ಹಾಕಿದರು. ಐದಾರು ಸಣ್ಣ ಸಣ್ಣ ಅಂಗಡಿಗಳನ್ನು ಕೆಡವಿದರು. ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳು ಕೈ ಮುಗಿದು ವಿನಂತಿಸಿದರೂ ಕೇಳದೆ ದೌರ್ಜನ್ಯದಿಂದ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಹೈಕೋರ್ಟ್ ಮತ್ತು ಭೂ ಕಬಳಿಕೆ ನಿಷೇಧ ಕೋರ್ಟ್ ಆದೇಶದ ಪ್ರಕಾರ ಗಂಗಾವತಿ ರಸ್ತೆಯ ಮಧ್ಯದಿಂದ 15 ಮೀಟರ್ ಬಿಟ್ಟು ಇನ್ನು 25 ಅಡಿ ಜಾಗ ಉಳಿಯುತ್ತದೆ. 10 ಅಡಿ ಅಂತರದಲ್ಲಿ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡರೂ ಇನ್ನೂ 15 ಅಡಿ ಜಾಗ ಖಾಲಿ ಉಳಿಯುತ್ತದೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಆದರೆ ಸುಳ್ಳು ವದಂತಿ ಹಬ್ಬಿಸಲಾಗಿದೆ’ ಎಂದು ಅವರು ತಿಳಿಸಿದರು.

ಶಾಸಕ ಹಂಪನಗೌಡ ಬಾದರ್ಲಿ ಅವರು ಏ.24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬೀದಿಬದಿ ವ್ಯಾಪಾರಸ್ಥರ ಸಮಸ್ಯೆ ಕುರಿತು ಪತ್ರ ನೀಡಿ, ತೋಟಗಾರಿಕೆ ಇಲಾಖೆಯ ಮುಂದಿನ ಜಾಗದ ಪೈಕಿ 10X10 ಜಾಗದಲ್ಲಿ ಬಾಡಿಗೆ ನಿಗದಿ ಮಾಡಿ ಬೀದಿ ವ್ಯಾಪಾರಿಗಳಿಗೆ ಕೊಡಬೇಕೆಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯಿಂದ ಆದೇಶ ಬರುವವರೆಗೂ ಬೀದಿ ವ್ಯಾಪಾರಿಗಳಿಗೆ ಯಾವುದೇ ತೊದರೆ ಕೊಡಬಾರದೆಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲ್ಲೂಕಾಡಳಿತ ಮತ್ತು ಜಿಲ್ಲಾಡಳಿತ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸುವವರಿಗೆ ಧರಣಿ ಸತ್ಯಾಗ್ರಹ ಮುಂದುವರಿಯುತ್ತದೆ’ ಎಂದು ಹೇಳಿದರು.

ಸಂಚಾಲಕ ಎಸ್.ದೇವೇಂದ್ರಗೌಡ ಮಾತನಾಡಿದರು. ಬೀದಿಬದಿ ವ್ಯಾಪಾರಿಗಳ ಹೋರಾಟ ಸಮಿತಿಯ ಅಧ್ಯಕ್ಷ ಖಾಸಿಂಸಾಬ್ ಕಾರ್ಪೇಂಟರ್, ಕಾರ್ಯದರ್ಶಿ ರಸೂಲ್ಸಾಬ್, ಖಜಾಂಚಿ ಹುಸೇನಪಾಷಾ, ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಬಿ.ಎನ್.ಯರದಿಹಾಳ, ಮಂಜುನಾಥ ಗಾಂಧಿನಗರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-209018764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.